ಬೆಳ್ತಂಗಡಿ: ವಿದ್ಯುತ್ ತಂತಿ ತಗುಲಿ ಯುವಕ ಮೃತ್ಯು ಪ್ರಕರಣ; ಮೂವರು ಆರೋಪಿಗಳ ಬಂಧನ
ಕಾಡು ಪ್ರಾಣಿಗಳನ್ನು ಹಿಡಿಯಲು ತಂತಿಗೆ ವಿದ್ಯುತ್ ಸಂಪರ್ಕ
Update: 2022-11-03 21:53 IST
ಬೆಳ್ತಂಗಡಿ: ಕಲ್ಮಂಜ ಗ್ರಾಮದಲ್ಲಿ ನೆಲದಲ್ಲಿ ತಂತಿಗೆ ವಿದ್ಯುತ್ ಸಂಪರ್ಕ ಕಲ್ಪಿಸಿ ವ್ಯಕ್ತಿಯ ಸಾವಿಗೆ ಕಾರಣರಾದ ಮೂವರು ಆರೋಪಿಗಳನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳು ಕಲ್ಮಂಜ ನಿವಾಸಿಗಳಾದ ಹರೀಶ್ ಗೌಡ (59) ಸುಮಂತ್ (21) ಹಾಗೂ ಪ್ರಶಾಂತ್ (30) ಎಂದು ಪೊಲೀಸರು ತಿಳಿಸಿದ್ದಾರೆ.
ಕಲ್ಮಂಜದಲ್ಲಿ ಕಾಡು ಪ್ರಾಣಿಗಳನ್ನು ಹಿಡಿಯಲೆಂದು ತಂತಿಗೆ ವಿದ್ಯುತ್ ಸಂಪರ್ಕಿಸಿದ ಆರೋಪಿಗಳು ಉದಯ ಗೌಡ ಎಂಬವರ ಸಾವಿಗೆ ಕಾರಣರಾಗಿದ್ದರು ಎಂದು ದೂರಲಾಗಿದೆ. ಘಟನೆಯ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರೂ ಆರೋಪಿಗಳ ಬಂಧನವಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಬುಧವಾರ ಕಾಂಗ್ರೆಸ್ ಕಾರ್ಯಕರ್ತರು ಧರ್ಮಸ್ಥಳ ಪೊಲೀಸ್ ಠಾಣೆಯ ಎದುರು ಪ್ರತಿಭಟನೆ ನಡೆಸಿದ್ದರು.
ಇದೀಗ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.