ಭ್ರಷ್ಟಾಚಾರಕ್ಕೆ ಸಂಬಂಧಿಸಿದ ದೂರುಗಳ ಬಗ್ಗೆ ಚರ್ಚೆ: ಸಾಮಾಜಿಕ ಹೋರಾಟಗಾರರ ನಿಯೋಗಕ್ಕೆ ಲೋಕಾಯುಕ್ತರ ಭರವಸೆ
ಬೆಂಗಳೂರು: ಸಾಮಾಜಿಕ ಕಾರ್ಯಕರ್ತರ ನಿಯೋಗ ಲೋಕಾಯುಕ್ತರನ್ನು ಭೇಟಿ ಮಾಡಿ ಭ್ರಷ್ಟಾಚಾರಕ್ಕೆ ಸಂಬಂಧಿಸಿದ ದೂರುಗಳ ಬಗ್ಗೆ ಚರ್ಚೆ ನಡೆಸಲಾಯಿತು.
ಲೋಕಾಯುಕ್ತವನ್ನು ಬಲಗೊಳಿಸಲು ನೀಡಲಾದ ಸಲಹೆಗಳನ್ನು ಅನುಷ್ಠಾನಗೊಳಿಸಲು ಕ್ರಮ ತೆಗೆದುಕೊಳ್ಳುವು ದಾಗಿ ಲೋಕಾಯುಕ್ತರು ಭರವಸೆ ನೀಡಿದರು.
ಈ ಸಂದರ್ಭ ಸಬ್ ರಿಜಿಸ್ಟರ್ ಕಚೇರಿಗಳಲ್ಲಿನ ವ್ಯಾಪಕ ಭ್ರಷ್ಟಾಚಾರ, BH ಲೋಪದೋಷಗಳ ಬಗ್ಗೆ ವಿಸ್ತೃತವಾದ ಚರ್ಚೆ ನಡೆಸಲಾಯಿತು. ಬಿಬಿಎಂಪಿಯ ದೂರುಗಳ ವಿಚಾರಣೆ ಬಗ್ಗೆ ಕೂಡ ಚರ್ಚೆ ನಡೆಸಲಾಯಿತು.
ಕಾವೇರಿ -2 ಅನುಷ್ಠಾನ ಹಾಗು ಹಳೆಯ ದಾಖಲೆಗಳ ಡಿಜಿಟಲೀಕರಣದ ಬಗ್ಗೆ, ರಾಜ್ಯದ ಆಡಳಿತದ ಚುಕ್ಕಾಣಿ ಹಿಡಿದ ಮುಖ್ಯಮಂತ್ರಿ, ಮಾಜಿ ಮುಖ್ಯಮಂತ್ರಿಗಳ ಮತ್ತು ಹಾಲಿ-ಮಾಜಿ ಸಚಿವರಾಗಿ ಕಾರ್ಯನಿರ್ವಹಿಸುತ್ತಿರು ವವರ ವಿರುದ್ಧದ ದೂರುಗಳನ್ನು ಶೀಘ್ರವಾಗಿ ವಿಲೇವಾರಿಗೊಳಿಸುವಂತೆ ಮನವಿ ಮಾಡಲಾಯಿತು. ಇದಕ್ಕೆ ಸ್ಪಂದಿಸಿದ ಲೋಕಾಯುಕ್ತರು ತ್ವರಿತ ಗತಿಯಲ್ಲಿ ವಿಚಾರಣೆ ನಡೆಸಿ ಕ್ರಮ ತೆಗೆದುಕೊಳ್ಳುವುದಾಗಿ ಭರವಸೆ ನೀಡಿದರು.
ನೈಜ ಹೋರಾಟಗಾರರ ವೇದಿಕೆಯ ಎಂ.ವೆಂಕಟೇಶ್, ಮಾಹಿತಿ ಹಕ್ಕು ಅಧ್ಯಯನ ಕೇಂದ್ರದ ವೀರೇಶ, ಜನಾಧಿಕಾರ ಸಂಘರ್ಷ ಪರಿಷತ್ ಇದರ ಆದರ್ಶ ಅಯ್ಯರ್ ಹಾಗು ಇತರರು ಈ ಸಂದರ್ಭ ಉಪಸ್ಥಿತರಿದ್ದರು.