×
Ad

ಗುಜರಾತ್ ವಿಧಾನಸಭಾ ಚುನಾವಣೆ: ಇಂದು ಆಮ್ ಆದ್ಮಿ ಪಕ್ಷದ ಸಿಎಂ ಅಭ್ಯರ್ಥಿ ಘೋಷಣೆ

Update: 2022-11-04 10:33 IST

ಹೊಸದಿಲ್ಲಿ: ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ ಸಂಚಾಲಕ ಅರವಿಂದ ಕೇಜ್ರಿವಾಲ್ Arvind Kejriwal  ಅವರು ಮುಂದಿನ ತಿಂಗಳು ನಡೆಯಲಿರುವ ಗುಜರಾತ್ ವಿಧಾನಸಭೆ ಚುನಾವಣೆಗೆ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯ ಹೆಸರನ್ನು ಶುಕ್ರವಾರ ಪ್ರಕಟಿಸಲಿದ್ದಾರೆ ಎಂದು ಪಕ್ಷದ ಪದಾಧಿಕಾರಿಗಳು ತಿಳಿಸಿದ್ದಾರೆ.

ರಾಜ್ಯದ ಜನತೆ ಪಕ್ಷಕ್ಕೆ ಸಲ್ಲಿಸುವ ಅಭಿಪ್ರಾಯದ ಆಧಾರದ ಮೇಲೆ ಸಿಎಂ ಅಭ್ಯರ್ಥಿಯನ್ನು ಹೆಸರಿಸಲಾಗುವುದು ಎಂದು ಪದಾಧಿಕಾರಿಗಳು ತಿಳಿಸಿದ್ದಾರೆ.

ಎಎಪಿಯಿಂದ ಸಿಎಂ ಹುದ್ದೆಯ ರೇಸ್‌ನಲ್ಲಿರುವವರಲ್ಲಿ ಅದರ ರಾಜ್ಯ ಘಟಕದ ಅಧ್ಯಕ್ಷ ಗೋಪಾಲ್ ಇಟಾಲಿಯಾ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಇಸುದನ್ ಗಧ್ವಿ ಮತ್ತು ಪ್ರಧಾನ ಕಾರ್ಯದರ್ಶಿ ಮನೋಜ್ ಸೊರತಿಹ್ಯ ಸೇರಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಹೆಸರನ್ನು ಪ್ರಕಟಿಸಲು ಕೇಜ್ರಿವಾಲ್ ಶುಕ್ರವಾರ ಅಹಮದಾಬಾದ್‌ನಲ್ಲಿ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ ಎಂದು ಪಕ್ಷವು ಗುರುವಾರ ಹೇಳಿಕೆಯಲ್ಲಿ ತಿಳಿಸಿದೆ.

ಪ್ರಸ್ತುತ ಬಿಜೆಪಿ  ಆಡಳಿತ ನಡೆಸುತ್ತಿರುವ ರಾಜ್ಯದಲ್ಲಿ ಪಕ್ಷದಿಂದ ಮುಖ್ಯಮಂತ್ರಿ ಅಭ್ಯರ್ಥಿ ಯಾರಾಗಬೇಕು ಎಂಬುದರ ಕುರಿತು ತಮ್ಮ ಅಭಿಪ್ರಾಯಗಳನ್ನು ನೀಡಲು ಎಸ್‌ಎಂಎಸ್, ವ್ಯಾಟ್ ಆ್ಯಪ್, ಧ್ವನಿ ಮೇಲ್ ಹಾಗೂ  ಇ-ಮೇಲ್ ಮೂಲಕ ಪಕ್ಷವನ್ನು ಸಂಪರ್ಕಿಸುವಂತೆ ಕಳೆದ ವಾರ ಕೇಜ್ರಿವಾಲ್ ಜನತೆಯನ್ನು ಒತ್ತಾಯಿಸಿದ್ದರು.

Similar News