ಮಹಿಳೆಯರಿಗೆ ಸಾಫ್ಟ್ ಸ್ಕಿಲ್ಸ್ ತರಬೇತಿ ಕಾರ್ಯಾಗಾರ
Update: 2022-11-04 20:57 IST
ಉಡುಪಿ : ಉಡುಪಿ ನಗರ ಕೇಂದ್ರ ಗ್ರಂಥಾಲಯ ಹಾಗೂ ಕೌಶಲ್ಯಾಭಿವೃದ್ಧಿ ಇವರ ಸಹಯೋಗದೊಂದಿಗೆ ನವೆಂಬರ್ 14ರಿಂದ 19ರ ವರೆಗೆ ಬೆಳಗ್ಗೆ 10 ರಿಂದ ಸಂಜೆ 4 ರವರೆಗೆ ನಗರದ ವಿದ್ಯಾವಾಚಸ್ಪತಿ ಡಾ. ಬನ್ನಂಜೆ ಗೋವಿಂದಾಚಾರ್ಯ ಸ್ಮಾರಕ ನಗರ ಕೇಂದ್ರ ಗ್ರಂಥಾಲಯದಲ್ಲಿ ಮಹಿಳೆ ಯರಿಗೆ ಸಾಫ್ಟ್ ಸ್ಕಿಲ್ಸ್ ಉಚಿತ ತರಬೇತಿ ಕಾರ್ಯಾಗಾರ ಹಮ್ಮಿ ಕೊಳ್ಳಲಾಗಿದೆ.
ಕಾರ್ಯಾಗಾರದಲ್ಲಿ ಪದವೀಧರರು ಮತ್ತು ಸ್ನಾತಕೋತ್ತರ ಪದವೀಧರರರು ಭಾಗವಹಿಸಬಹುದಾಗಿದೆ. ಆಸಕ್ತರು ನ.10ರೊಳಗೆ ತಮ್ಮ ಹೆಸರು, ವಿಳಾಸ, ವಿದ್ಯಾರ್ಹತೆ, ದೂರವಾಣಿ ಸಂಖ್ಯೆ, ಕಾಲೇಜಿನ ವಿಳಾಸ ಇತ್ಯಾದಿ ವಿವರಗಳನ್ನು ದೂ.ಸಂಖ್ಯೆ: 0820-2523395, ನಗರ ಕೇಂದ್ರ ಗ್ರಂಥಾಲಯ ಕಚೇರಿಯಲ್ಲಿ ಅಥವಾ ಇ-ಮೇಲ್ - ccludupi@gmail.com- ಮೂಲಕ ನೋಂದಾಯಿಸಿ ಕೊಳ್ಳುವಂತೆ ನಗರ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.