ಡಿ.ಕೆ.ಶಿವಕುಮಾರ್‌ ಗೆ ಮತ್ತೆ ಈಡಿ ನೋಟಿಸ್, ನ. 7ರಂದು ವಿಚಾರಣೆಗೆ ಹಾಜರಾಗುವಂತೆ ಸೂಚನೆ

Update: 2022-11-04 15:37 GMT

ಬೆಂಗಳೂರು, ನ.4: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಜಾರಿ ನಿರ್ದೇಶನಾಲಯ(ಈಡಿ) ಶುಕ್ರವಾರ ಮತ್ತೆ ನೋಟಿಸ್ ಜಾರಿ ಮಾಡಿದೆ. 

ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೊ ಯಾತ್ರೆ ಕರ್ನಾಟಕ ಪ್ರವೇಶಿಸಿದ್ದ ವೇಳೆ ಡಿ.ಕೆ.ಶಿವಕುಮಾರ್ ಅವರಿಗೆ ನೋಟಿಸ್ ನೀಡಿದ್ದ ಈಡಿ, ಈಗ ಮತ್ತೆ ನೋಟಿಸ್ ನೀಡಿದ್ದು, ನ.7ರಂದು(ಸೋಮವಾರ) ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ. 

ಕಾಂಗ್ರೆಸ್ ನೂತನ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ನ.6ರಂದು ಬೆಂಗಳೂರಿಗೆ ಆಗಮಿಸುತ್ತಿದ್ದು, ಅವರಿಗೆ ಅದ್ದೂರಿ ಸ್ವಾಗತ ನೀಡಲು ಭರ್ಜರಿ ಸಿದ್ಧತೆ ನಡೆಸುತ್ತಿದ್ದ ಕೆಪಿಸಿಸಿ ಅಧ್ಯಕ್ಷರಿಗೆ ಈಗ ಈಡಿ ನೋಟಿಸ್ ತೀವ್ರ ಇಕ್ಕಟ್ಟಿಗೆ ಸಿಲುಕಿದೆ.

Similar News