ಕೆಎಸ್ಸಾರ್ಟಿಸಿ ಬಸ್ ಢಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Update: 2022-11-05 11:29 GMT

ಬೆಂಗಳೂರು, ನ. 5: ಕೆಎಸ್ಸಾರ್ಟಿಸಿ ಬಸ್ ಬೈಕ್ ಢಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ರಾಜಾಜಿನಗರದ ರಾಜಕುಮಾರ್ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ ನಡೆದಿದೆ.

ರಾಜಾಜಿನಗರದ ಖಾಸಗಿ ಕಂಪೆನಿಯ ಉದ್ಯೋಗಿ ರಮೇಶ್(39) ಮೃತಪಟ್ಟ ಬೈಕ್ ಸವಾರ ಎಂದು ಗುರುತಿಸಲಾಗಿದೆ.

ತಡರಾತ್ರಿ ಕುಕ್ಕೆ ಸುಬ್ರಹ್ಮಣ್ಯದಿಂದ ನಗರಕ್ಕೆ ಬರುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ರಾಜಾಜಿನಗರದ ಡಾ.ರಾಜ್‍ಕುಮಾರ್ ರಸ್ತೆ ಮೂಲಕ ಮೆಜೆಸ್ಟಿಕ್ ಮಾರ್ಗವಾಗಿ ತೆರಳುತ್ತಿತ್ತು. ಈ ವೇಳೆ ಬೈಕ್‍ನಲ್ಲಿ ಹೋಗುತ್ತಿದ್ದ ರಮೇಶ್, ಬಲತಿರುವು ಪಡೆದುಕೊಳ್ಳುವಾಗ ಬಸ್ ಢಿಕ್ಕಿಯಾಗಿ ಕೆಳಗೆ ಬಿದ್ದು ತಲೆಗೆ ಗಂಭೀರ ಗಾಯಗೊಂಡಿದ್ದು, ತಕ್ಷಣವೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆನ್ನಲಾಗಿದೆ.

ಈ ಸಂಬಂಧ ರಾಜಾಜಿನಗರ ಸಂಚಾರ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಾಗಿದ್ದು, ತನಿಖೆ ಕೈಗೊಳ್ಳಲಾಗಿದೆ.

Similar News