×
Ad

MEIF ದ.ಕ., ಉಡುಪಿ ಜಿಲ್ಲೆ ವತಿಯಿಂದ ಶಿಕ್ಷಕರಿಗೆ ಕಾರ್ಯಾಗಾರ

Update: 2022-11-05 17:47 IST

ಬಂಟ್ವಾಳ, ನ.5: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಮುಸ್ಲಿಮ್ ಶಿಕ್ಷಣ ಸಂಸ್ಥೆಗಳ ಒಕ್ಕೂಟ (MEIF)ದ ವತಿಯಿಂದ ಬಿ.ಸಿ.ರೋಡ್ ಸಮೀಪದ ತಲಪಾಡಿ ಡೈಮಂಡ್ ಇಂಟರ್ ನ್ಯಾಷನಲ್ ವಿದ್ಯಾ ಸಂಸ್ಥೆಯಲ್ಲಿ ಶುಕ್ರವಾರ ಮತ್ತು ಶನಿವಾರ ಶಿಕ್ಷಕರಿಗೆ ಕಾರ್ಯಾಗಾರ ನಡೆಯಿತು.

ಕಾರ್ಯಾಗಾರದಲ್ಲಿ ಶಿಕ್ಷಣ ಕಲೆ, ಮೈಂಡ್ ಮ್ಯಾಪಿಂಗ್, ಮಕ್ಕಳ ಮನೋವಿಜ್ಞಾನ, ಆಧುನಿಕ ತಂತ್ರಜ್ಞಾನ ಹೊಂದಿಕೊಂಡು ಕಲಿಕಾ ವಿಧಾನವನ್ನು ಅಳವಡಿಸುವ ವಿಚಾರದಲ್ಲಿ ರಾಷ್ಟ್ರೀಯ ತರಬೇತುದಾರ ಪ್ರೊ. ರಾಜೇಂದ್ರ ಭಟ್ ಮತ್ತು ಮಂಗಳೂರು ಪಿ.ಎ. ಕಾಲೇಜಿನ ಪ್ರಾಂಶುಪಾಲ ಡಾ. ಸರ್ಫರಾಝ್ ಜೆ. ಹಾಸಿಮ್ ಅವರು ಸಂಪನ್ಮೂಲ ವ್ಯಕ್ತಿಗಳಾಗಿ ತರಬೇತಿ ನೀಡಿದರು.

ಎಸ್.ಎಂ.ಆರ್. ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ. ಎಸ್.ಎಂ.ರಶೀದ್ ಹಾಜಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಪಿ.ಜ್ಞಾನೇಶ್, ಬಂಟ್ವಾಳ ಸಂಯುಕ್ತ ಜಮಾಅತ್ ಅಧ್ಯಕ್ಷ ಹನೀಫ್ ಹಾಜಿ ಗೋಳ್ತಮಜಲ್ ಭಾಗವಹಿಸಿದ್ದರು.

ಡೈಮಂಡ್ ವಿದ್ಯಾ ಸಂಸ್ಥೆಯ ಅಧ್ಯಕ್ಷ ಸಲೀಮ್ ಅಲ್ತಾಫ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಮುಸ್ಲಿಮ್ ಶಿಕ್ಷಣ ಸಂಸ್ಥೆಗಳ ಒಕ್ಕೂಟದ ಅಧ್ಯಕ್ಷ ಮೂಸಬ್ಬ ಬ್ಯಾರಿ, ಉಪಾಧ್ಯಕ್ಷ ಕೆ.ಎಂ.ಮುಸ್ತಫಾ, ಡೈಮಂಡ್ ವಿದ್ಯಾ ಸಂಸ್ಥೆಯ ಪ್ರಾಂಶುಪಾಲ ಗಿರೀಶ್ ಕಾಮತ್ ಉಪಸ್ಥಿತರಿದ್ದರು.

ಬೆಳ್ತಂಗಡಿ, ಸುಳ್ಯ, ಪುತ್ತೂರು, ಕಡಬ ತಾಲೂಕು ವ್ಯಾಪ್ತಿಯ 21 ವಿದ್ಯಾಸಂಸ್ಥೆಗಳ ಶಿಕ್ಷಕರು ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು. ಕಾರ್ಯಾಗಾರವು ಅತ್ಯಂತ ಉಪಯುಕ್ತ ಹಾಗೂ ಪರಿಣಾಕಾರಿಯಾಗಿ ಮೂಡಿಬಂದ ಬಗ್ಗೆ ಕಾರ್ಯಾಗಾರದಲ್ಲಿ ಭಾಗವಹಿಸಿದ ಶಿಕ್ಷಕರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.

ಹನೀಫ್ ಹಾಜಿ ಗೋಳ್ತಮಜಲ್ ಪ್ರಮಾಣ ಪತ್ರ ಹಾಗೂ ಬಹುಮಾನವನ್ನು ವಿತರಿಸಿದರು.

ಮುಸ್ಲಿಮ್ ಶಿಕ್ಷಣ ಸಂಸ್ಥೆಗಳ ಒಕ್ಕೂಟದ ಕಾರ್ಯದರ್ಶಿ ರಿಯಾಝ್ ಅಹ್ಮದ್ ಕಣ್ಣೂರ್ ಮಾತನಾಡಿದರು. ಸನಾ ಅಲ್ತಾಫ್ ಸ್ವಾಗತಿಸಿದರು. ಬುರೂಜ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ರಹ್ಮತ್ತುಲ್ಲಾ ವಂದಿಸಿದರು. ಡೈಮಂಡ್ ವಿದ್ಯಾ ಸಂಸ್ಥೆಯ ಸಂಯೋಜಕಿ ಶೈಲಾಕ್ಷಿ ಕಾರ್ಯಕ್ರಮ ನಿರೂಪಿಸಿದರು.

Similar News