ನ.6ರಿಂದ ಸಚಿವ ಗೋವಿಂದ ಕಾರಜೋಳ ಉಡುಪಿ ಪ್ರವಾಸ
ಉಡುಪಿ, ನ.5: ರಾಜ್ಯದ ಜಲಸಂಪನ್ಮೂಲ ಇಲಾಖೆ ಸಚಿವ ಗೋವಿಂದ ಎಂ ಕಾರಜೋಳ ನ.6ರಿಂದ 8ರವರೆಗೆ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
ನ.6ರಂದು ಅಪರಾಹ್ನ ಉಡುಪಿಗೆ ಆಗಮಿಸುವ ಅವರು, 3:00 ಗಂಟೆಗೆ ಸರ್ಕ್ಯೂಟ್ ಹೌಸ್‌ನಲ್ಲಿ ವರಾಹಿ ವೃತ್ತ ಯೋಜನೆಗಳ ಪ್ರಗತಿ ಪರಿಶೀಲನೆ ಸಭೆಯಲ್ಲಿ ಭಾಗವಹಿಸಿ, ನಂತರ ಸೌಕೂರು ಏತ ನೀರಾವರಿ ಯೋಜನೆ ಕಾಮಗಾರಿಗಳ ಪರೀಕ್ಷಣೆ ನಡೆಸುವರು.
ನ.7ರಂದು ಬೆಳಗ್ಗೆ 11:00ಕ್ಕೆ ಮುಖ್ಯಮಂತ್ರಿಗಳೊಂದಿಗೆ ಕಾಪುವಿನ ಜನ ಸಂಕಲ್ಪ ಕಾರ್ಯಕ್ರಮ, ಅಪರಾಹ್ನ 1:50ಕ್ಕೆ ಉಡುಪಿಯ ಎಂಜಿಎಂ ಕಾಲೇಜಿ ನಲ್ಲಿ ನಡೆಯುವ ಕರಾವಳಿಯ ಹಿರಿಯ ಪತ್ರಿಕೋದ್ಯೋಗಿಗಳ ಸಂಸ್ಮರಣ ಕಾರ್ಯಕ್ರಮ, 3:30ಕ್ಕೆ ಕುಂದಾಪುರ ತಾಲೂಕು ಹೊಸಾಡು ಗ್ರಾಮದ ಮುಳ್ಳಿಕಟ್ಟೆಯಲ್ಲಿ ಜಿಲ್ಲಾಡಳಿತದ ವತಿಯಿಂದ ನಡೆಯುವ ಬೈಂದೂರು ವಿಧಾನ ಸಭಾ ಕ್ಷೇತ್ರದ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಹಾಗೂ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಕೊಲ್ಲೂರಿನಲ್ಲಿ ವಾಸ್ತವ್ಯ ಮಾಡುವರು.
ನ.8ರಂದು ಬೆಳಗ್ಗೆ 8:30ಕ್ಕೆ ಕೊಲ್ಲೂರು ಶ್ರೀ ಮೂಕಾಂಬಿಕಾದೇವಿ ದೇವಸ್ಥಾನಕ್ಕೆ ಭೇಟಿ ನೀಡಿ, ದರ್ಶನ ಪಡೆದು 9:30ಕ್ಕೆ ಅರೆಶಿರೂರು ಹೆಲಿಪ್ಯಾಡ್‌ನಿಂದ ಹೆಲಿಕಾಪ್ಟರ್ ಮೂಲಕ ಶಿರಹಟ್ಟಿಗೆ ತೆರಳಲಿದ್ದಾರೆ.
ಕೋಟ ಶ್ರೀನಿವಾಸ ಪೂಜಾರಿ: ರಾಜ್ಯದ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ನ.7ರಂದು ಮುಖ್ಯಮಂತ್ರಿಗಳೊಂದಿಗೆ ಜಿಲ್ಲಾ ಪ್ರವಾಸ ಕಾರ್ಯಕ್ರಮ ದಲ್ಲಿ ಪಾಲ್ಗೊಳ್ಳುವರು.