×
Ad

ಕೋಲಾರ: ಹೆಣ್ಣು ಮಗು ಜನಿಸಿದ್ದರಿಂದ ನೊಂದು ವ್ಯಕ್ತಿ ಆತ್ಮಹತ್ಯೆ

Update: 2022-11-06 12:07 IST

ಕೋಲಾರ, ನ.6: ಹೆಣ್ಣು ಮಗು ಹುಟ್ಟಿದ್ದಕ್ಕೆ ಮನನೊಂದು ವ್ಯಕ್ತಿಯೋರ್ವ ಆತ್ಮಹತ್ಯೆ(suicide) ಮಾಡಿಕೊಂಡ ಘಟನೆ ಕೋಲಾರ ಜಿಲ್ಲೆಯಿಂದ ವರದಿಯಾಗಿದೆ.

ಶ್ರೀನಿವಾಸಪುರ ತಾಲ್ಲೂಕು ಶೆಟ್ಟಿಹಳ್ಳಿ ಗ್ರಾಮದ ನಿವಾಸಿ ಲೋಕೇಶ್ ಆತ್ಮಹತ್ಯೆ ಮಾಡಿಕೊಂಡವರು ಎಂದು ತಿಳಿದುಬಂದಿದೆ.

ಲೋಕೇಶ್ ರಿಗೆ ಈಗಾಗಲೇ ಮೂರು ಜನ‌ ಹೆಣ್ಣುಮಕ್ಕಳಿದ್ದು ನಾಲ್ಕನೇ ಮಗುವು ಹೆಣ್ಣಾದ ಹಿನ್ನೆಲೆಯಲ್ಲಿ ಬೇಸತ್ತು ಕಳೆದ ರಾತ್ರಿ ಮನೆಯಲ್ಲಿ ಪ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸ್ ದೂರಿನಲ್ಲಿ ತಿಳಿಸಲಾಗಿದೆ.

ಶ್ರೀನಿವಾಸಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ  ಜರುಗಿದ್ದು, ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ತನಿಖೆ ಮುಂದುವರಿಸಿದ್ದಾರೆ.

ಇದನ್ನೂ ಓದಿ: ಗಾಯಕ ಆರೊನ್ ಕಾರ್ಟರ್ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ

Similar News