×
Ad

ಎಡಪದವು ಗ್ರಾಪಂ: ಕಾನೂನು ಮಾಹಿತಿ ಮತ್ತು ಜಾಗೃತಿ ಕಾರ್ಯಕ್ರಮ

Update: 2022-11-06 21:08 IST

ಮಂಗಳೂರು : ದ.ಕ. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಎಡಪದವು ಗ್ರಾಪಂ ವತಿಯಿಂದ ಪಂಚಾಯತ್ ಸಭಾಂಗಣದಲ್ಲಿ ಕಾನೂನು ಅರಿವು ಮತ್ತು ಜಾಗೃತಿ ಕಾರ್ಯಕ್ರಮ ನಡೆಯಿತು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಪ್ಯಾನೆಲ್ ವಕೀಲ ವಾಸುದೇವ ಗೌಡ ಸ್ಥಳೀಯಾಡಳಿತ ಮತ್ತು ಮಹಿಳಾ ಸಬಲೀಕರಣದ ಬಗ್ಗೆ ಮಾಹಿತಿ ನೀಡಿದರು.

ಈ ಸಂದರ್ಭ ಗ್ರಾಪಂನ ವಿವಿಧ ಯೋಜನೆಗಳಿಗೆ ಸಂಬಂಧಿಸಿದಂತೆ ಪ್ರಮಾಣಪತ್ರವನ್ನು ಅರ್ಹ ಫಲಾನುಭವಿಗಳಿಗೆ ನೀಡಲಾಯಿತು.

ಗ್ರಾಪಂ ಅಧ್ಯಕ್ಷ ಸುಕುಮಾರ್ ದೇವಾಡಿಗ, ಉಪಾಧ್ಯಕ್ಷೆ ಪ್ರೇಮಾ, ವಕೀಲರಾದ ಶುಕರಾಜ್ ಕೊಟ್ಟಾರಿ, ಕಾನೂನು ಸೇವೆಗಳ ಪ್ರಾಧಿಕಾರದ ಅಧಿಕಾರಿ ರೂಪೇಶ್ ಉಪಸ್ಥಿತರಿದ್ದರು.

Similar News