ಗೃಹರಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ
Update: 2022-11-08 20:09 IST
ಉಡುಪಿ, ನ.8: ಉಡುಪಿ ಜಿಲ್ಲಾ ಗೃಹರಕ್ಷಕ ದಳ ಇಲಾಖೆಯಲ್ಲಿ ಗೃಹರಕ್ಷಕರಾಗಿ ಸೇವೆ ಸಲ್ಲಿಸಲು ಇಚ್ಛಿಸುವ ಅರ್ಹ ಪುರುಷ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಎಸೆಸೆಲ್ಸಿ ಉತ್ತೀರ್ಣ ಹಾಗೂ ಮೇಲ್ಪಟ್ಟ ವಿದ್ಯಾರ್ಹತೆ ಹೊಂದಿರುವ 19ರಿಂದ 45 ವರ್ಷದೊಳಗಿನ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ನವೆಂಬರ್ 20 ಕೊನೆಯ ದಿನ.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಬೈಂದೂರು ಘಟಕದ ರಾಘವೇಂದ್ರ ಮೊ.ನಂ: 9449469838, ಕುಂದಾಪುರ ಘಟಕದ ಭಾಸ್ಕರ್ ಮೊ.ನಂ: 9242126368, ಬ್ರಹ್ಮಾವರ ಘಟಕದ ಸ್ಟೀವನ್ ಪ್ರಕಾಶ್ ಮೊ.ನಂ: 9731897356, ಕಾರ್ಕಳ ಘಟಕದ ಪ್ರಭಾಕರ ಸುವರ್ಣ ಮೊ.ನಂ: 9632002170, ಕಾಪು ಘಟಕದ ಲಕ್ಷ್ಮೀನಾರಾಯಣ ರಾವ್ ಮೊ.ನಂ: 9743491084, ಪಡುಬಿದ್ರೆ ಘಟಕದ ನವೀನ್ ಮೊ.ನಂ: 9880343236, ಮಣಿಪಾಲ ಘಟಕದ ಶೇಖರ್ ಮೊ.ನಂ: 6360895883 ಹಾಗೂ ಉಡುಪಿ ಘಟಕದ ಕುಮಾರ್ ಮೊ.ನಂ: 8971682721ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಕಮಾಂಡೆಂಟ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.