ಹಿಮಾಚಲ ಪ್ರದೇಶದಲ್ಲಿ 26 ಕಾಂಗ್ರೆಸ್ ನಾಯಕರು ಬಿಜೆಪಿ ಸೇರ್ಪಡೆ

Update: 2022-11-09 02:06 GMT

ಶಿಮ್ಲಾ: ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷದ 26 ನಾಯಕರು ಸೋಮವಾರ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ರಾಜ್ಯದಲಿ ವಿಧಾನಸಭಾ ಚುನಾವಣೆ ನಡೆಯುವುದಕ್ಕೆ ಕೆಲವೇ ದಿನಗಳ ಮೊದಲು ಈ ಬೆಳವಣಿಗೆ ಸಂಭವಿಸಿದೆ.

ಕಾಂಗ್ರೆಸ್ ಪಕ್ಷದ ಮಾಜಿ ಪ್ರಧಾನ ಕಾರ್ಯದರ್ಶಿ ಧರಮ್‌ಪಾಲ್ ಠಾಕೂರ್, ಮಾಜಿ ಕಾರ್ಯದರ್ಶಿ ಆಕಾಶ್ ಸೈನಿ, ಮಾಜಿ ಕೌನ್ಸಿಲರ್ ರಾಜನ್ ಠಾಕೂರ್ ಹಾಗೂ ಇತರ ನಾಯಕರಾದ ಅಮಿತ್ ಮೆಹ್ತಾ, ಮೆಹರ್ ಸಿಂಗ್ ಕನ್ವರ್ ಮತ್ತು ರಾಹುಲ್ ನೇಗಿ- ಬಿಜೆಪಿಗೆ ಸೇರ್ಪಡೆಗೊಂಡವರು.

ಅವರು ಮುಖ್ಯಮಂತ್ರಿ ಜೈರಾಮ್ ಠಾಕೂರ್ ಮತ್ತು ಪಕ್ಷದ ರಾಷ್ಟ್ರೀಯ ಉಪಾಧ್ಯಕ್ಷ ಸೌದಾನ್ ಸಿಂಗ್‌ರ ಸಮ್ಮುಖದಲ್ಲಿ ಬಿಜೆಪಿ ಸೇರಿದರು. ಕಾಂಗ್ರೆಸ್‌ನ ‘ಶೋಷಕ ನೀತಿ’ಗಳಿಂದ ರೋಸಿ ಹೋಗಿ ಅವರು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ ಎಂದು ಬಿಜೆಪಿ ಹೇಳಿಕೊಂಡಿದೆ.

68 ಸ್ಥಾನಗಳ ಹಿಮಾಚಲ ಪ್ರದೇಶ ವಿಧಾನಸಭೆಗೆ ನವೆಂಬರ್ 12ರಂದು ಏಕ ಹಂತದಲ್ಲಿ ಮತದಾನ ನಡೆಯಲಿದೆ. ಫಲಿತಾಂಶವನ್ನು ಡಿಸೆಂಬರ್ 8ರಂದು ಪ್ರಕಟಿಸಲಾಗುತ್ತದೆ.

Similar News