ಭಾರತದ 50ನೇ ಮುಖ್ಯ ನ್ಯಾಯಮೂರ್ತಿಯಾಗಿ ಡಿ.ವೈ. ಚಂದ್ರಚೂಡ್ ಅಧಿಕಾರ ಸ್ವೀಕಾರ

Update: 2022-11-09 05:35 GMT

ಹೊಸದಿಲ್ಲಿ: ಭಾರತದ 50ನೇ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾಯಮೂರ್ತಿ ಧನಂಜಯ ವೈ. ಚಂದ್ರಚೂಡ್ Justice Dhananjaya Y Chandrachud ಬುಧವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಮಾಣ ವಚನ ಬೋಧಿಸಿದ್ದಾರೆ.

ನ್ಯಾಯಮೂರ್ತಿ ಚಂದ್ರಚೂಡ್ ಅವರು ಸುಪ್ರೀಂ ಕೋರ್ಟ್‌ನ ಮುಖ್ಯಸ್ಥರಾಗಿ ನವೆಂಬರ್ 10, 2024 ರವರೆಗೆ ಎರಡು ವರ್ಷಗಳ ಕಾಲ ಸೇವೆ ಸಲ್ಲಿಸಲಿದ್ದಾರೆ.  ಚಂದ್ರಚೂಡ್  ಅವರು 74 ದಿನಗಳ ಅಲ್ಪಾವಧಿಗೆ ಸಿಜೆಐ ಹುದ್ದೆಯಲ್ಲಿದ್ದ ನ್ಯಾಯಮೂರ್ತಿ ಉದಯ್ ಉಮೇಶ್ ಲಲಿತ್ ಅವರ ಉತ್ತರಾಧಿಕಾರಿಯಾಗಿದ್ದಾರೆ.

ನ್ಯಾಯಮೂರ್ತಿ ಚಂದ್ರಚೂಡ್ ಅವರು ಮೇ 13, 2016 ರಂದು ಸುಪ್ರೀಂ ಕೋರ್ಟ್ ನ್ಯಾಯಾಧೀಶರಾಗಿ ನೇಮಿಸಲ್ಪಟ್ಟರು. ಅಯೋಧ್ಯೆ ಭೂ ವಿವಾದ ಹಾಗೂ  ಖಾಸಗಿತನದ ಹಕ್ಕು ಸೇರಿದಂತೆ ಹಲವಾರು ಸಂವಿಧಾನ ಪೀಠಗಳು ಹಾಗೂ  ಮಹತ್ವದ ತೀರ್ಪುಗಳ ಭಾಗವಾಗಿದ್ದಾರೆ.

ನ್ಯಾಯಮೂರ್ತಿ ಚಂದ್ರಚೂಡ್ ಅವರು ಏಳು ವರ್ಷಗಳ ಕಾಲ ಭಾರತದ ಮುಖ್ಯ ನ್ಯಾಯಮೂರ್ತಿಯಾಗಿ  ದೀರ್ಘ ಸಮಯ ಉನ್ನತ ಹುದ್ದೆಯಲ್ಲಿದ್ದ ದಿವಂಗತ ನ್ಯಾಯಮೂರ್ತಿ ವೈ.ವಿ.ಚಂದ್ರಚೂಡ್ ಅವರ ಪುತ್ರರಾಗಿದ್ದಾರೆ.

Similar News