×
Ad

ರಾಜ್ಯಪಾಲರನ್ನು ತಕ್ಷಣವೇ ವಜಾಗೊಳಿಸಿ: ರಾಷ್ಟ್ರಪತಿಗೆ ತಮಿಳುನಾಡಿನ ಆಡಳಿತಾರೂಢ ಡಿಎಂಕೆ ಮನವಿ

Update: 2022-11-09 10:37 IST

ಚೆನ್ನೈ: ರಾಜ್ಯಪಾಲ ಆರ್.ಎನ್.ರವಿ ಅವರು “ಶಾಂತಿಗೆ ಬೆದರಿಕೆ’’ ಆಗಿದ್ದಾರೆ ಎಂದು ಕರೆದಿರುವ ತಮಿಳುನಾಡಿನ ಆಡಳಿತ ಪಕ್ಷ ಡಿಎಂಕೆ, "ಪ್ರಜಾಸತ್ತಾತ್ಮಕವಾಗಿ ಚುನಾಯಿತ ಸರಕಾರಕ್ಕೆ ಜನರ ಸೇವೆಗೆ ಅಡ್ಡಿಪಡಿಸಿದ" ಕಾರಣಕ್ಕಾಗಿ ಅವರನ್ನು ಪದಚ್ಯುತಗೊಳಿಸುವಂತೆ ರಾಷ್ಟ್ರಪತಿಗಳಿಗೆ ಮನವಿ ಪತ್ರ ಸಲ್ಲಿಸಿದೆ. ಅವರು ಕೋಮು ದ್ವೇಷವನ್ನು ಪ್ರಚೋದಿಸುತ್ತಾರೆ ಎಂದು ಡಿಎಂಕೆ ಆರೋಪಿಸಿದೆ.

"ರಾಜ್ಯಪಾಲ ಆರ್‌.ಎನ್. ರವಿ ಅವರು ಸಂವಿಧಾನ ಹಾಗೂ  ಕಾನೂನನ್ನು ಸಂರಕ್ಷಿಸಲು, ರಕ್ಷಿಸಲು ಮತ್ತು ಸಮರ್ಥಿಸಿಕೊಳ್ಳುತ್ತೇನೆಂಬ ವಚನವನ್ನು ಉಲ್ಲಂಘಿಸಿದ್ದಾರೆ" ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಸಲ್ಲಿಸಿದ ಮನವಿಯಲ್ಲಿ ಡಿಎಂಕೆ ತಿಳಿಸಿದೆ.

ಅಸೆಂಬ್ಲಿ ಅಂಗೀಕರಿಸಿದ ಮಸೂದೆಗಳಿಗೆ ಸಮ್ಮತಿ ನೀಡಲು ರಾಜ್ಯಪಾಲರು ಅನಗತ್ಯವಾಗಿ ವಿಳಂಬ ಮಾಡುತ್ತಾರೆ ಎಂದು ಡಿಎಂಕೆ ಆರೋಪಿಸಿದೆ.

ಈ ಬಗ್ಗೆ ರಾಜ್ಯಪಾಲ ರವಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

Similar News