ಅಕ್ರಮ ಹಣ ವರ್ಗಾವಣೆ ಪ್ರಕರಣ: ಶಿವಸೇನೆ ಸಂಸದ ಸಂಜಯ್ ರಾವುತ್ ಗೆ ಜಾಮೀನು

Update: 2022-11-09 08:30 GMT

ಮುಂಬೈ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಶಿವಸೇನೆಯ ಉದ್ಧವ್ ಠಾಕ್ರೆ ಬಣದ ಹಿರಿಯ ನಾಯಕ ಹಾಗೂ  ಅವರ ಆಪ್ತರಲ್ಲಿ ಒಬ್ಬರಾದ ಸಂಜಯ್ ರಾವುತ್ Sanjay Raut, senior leader of the Shiv Sena ಅವರಿಗೆ ವಿಶೇಷ ನ್ಯಾಯಾಲಯವು ಬುಧವಾರ ಜಾಮೀನು ಮಂಜೂರು ಮಾಡಿದೆ.

ರಾಜ್ಯಸಭಾ ಸದಸ್ಯರಾಗಿರುವ ಫೈರ್‌ಬ್ರಾಂಡ್ ನಾಯಕ ಕಳೆದ ಮೂರೂವರೆ ತಿಂಗಳಿನಿಂದ ಜೈಲಿನಲ್ಲಿದ್ದರು.

ಎರಡೂ ಕಡೆಯ ವಾದಗಳನ್ನು ಆಲಿಸಿದ ನ್ಯಾಯಾಲಯ ಜಾಮೀನು ಅರ್ಜಿಯ ಆದೇಶವನ್ನು ಅಕ್ಟೋಬರ್ 21 ರಂದು ಕಾಯ್ದಿರಿಸಿತ್ತು.

ಮುಂಬೈನ ವಸತಿ ಕಾಲೋನಿಯೊಂದರ ಪುನರಾಭಿವೃದ್ಧಿಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದಂತೆ ಸಂಜಯ್ ರಾವುತ್ ಅವರನ್ನು ಆಗಸ್ಟ್ 1 ರಂದು ಜಾರಿ ನಿರ್ದೇಶನಾಲಯವು(ಈಡಿ) ಕಸ್ಟಡಿಗೆ ತೆಗೆದುಕೊಂಡಿತ್ತು.

ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿಯಲ್ಲಿ ಬಂಧಿಸುವ ಮೊದಲು ರಾಜ್ಯಸಭಾ ಸಂಸದ ಎರಡು ಬಾರಿ ಏಜೆನ್ಸಿಯ ಸಮನ್ಸ್‌ನಿಂದ ಹೊರಗುಳಿದಿದ್ದರು.

Similar News