ಭಾರತ್ ಜೋಡೊ ಯಾತ್ರೆಯಲ್ಲಿ KGF -2 ಚಿತ್ರದ ಹಾಡು ಬಳಕೆ ವಿವಾದ: ಲಹರಿ ವೇಲು ವಿರುದ್ಧ ನಟಿ ರಮ್ಯಾ ಕಿಡಿ

Update: 2022-11-09 09:00 GMT

ಬೆಂಗಳೂರು: ಭಾರತ್ ಜೋಡೊ ಯಾತ್ರೆ ವೇಳೆ KGF -2 ಚಿತ್ರದ ಧ್ವನಿ ದಾಖಲೆಯನ್ನು ಅಕ್ರಮವಾಗಿ ಬಳಸಿದ ಆರೋಪದ ಮೇಲೆ ಎಂಆರ್‌ಟಿ ಸಂಗೀತ ಕಂಪನಿಯಿಂದ ನ್ಯಾಯಾಲಯಕ್ಕೆ ದಾವೆ ಹೂಡಿರುವ ವಿಚಾರಕ್ಕೆ ಸಂಬಂಧಿಸಿ ಮಾಜಿ ಸಂಸದೆ ಹಾಗೂ ನಟಿ ರಮ್ಯಾ (Ramya) ಅವರು ಲಹರಿ ಮ್ಯೂಸಿಕ್ ಸಂಸ್ಥೆಯ ಲಹರಿ ವೇಲು ವಿರುದ್ಧ ಕಿಡಿಕಾರಿದ್ದಾರೆ. 

ಈ ಸಂಬಂಧ ಟ್ವೀಟ್ ಮಾಡಿರುವ ರಮ್ಯಾ ಅವರು, ''ಲಹರಿ ವೇಲು ಅವರು ಚುನಾವಣೆಗೆ ಸ್ಪರ್ಧಿಸಲು ಬಿಜೆಪಿ ಟಿಕೆಟ್‌ ಗಾಗಿ ಪ್ರಯತ್ನ ನಡೆಸುತ್ತಿದ್ದಾರೆಯೇ ?'' ಎಂದು ಪ್ರಶ್ನಿಸುವ ಮೂಲಕ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

''ಕೆಜಿಎಫ್ ಹಾಡುಗಳನ್ನು ಎಲ್ಲರೂ ವ್ಯಾಪಕವಾಗಿ ಹಂಚಿಕೊಂಡಿದ್ದಾರೆ. ಅದಕ್ಕೆಲ್ಲ ಆಕ್ಷೇಪ ಎತ್ತದ ಲಹರಿ ವೇಲು ಅವರಿಗೆ,  ಕಾಂಗ್ರೆಸ್ ಬಳಸಿಕೊಂಡಾಗ ಮಾತ್ರ ಸಮಸ್ಯೆಯಾಗಿದೆಯೇ?'' ಎಂದು ಪ್ರಶ್ನೆ ಮಾಡಿದ್ದಾರೆ. 

ಸದ್ಯ ಹಕ್ಕುಸ್ವಾಮ್ಯ ಉಲ್ಲಂಘನೆಯ ಮೊಕದ್ದಮೆಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷ(ಐಎನ್‌ಸಿ)ಹಾಗೂ ಅದರ ಭಾರತ್ ಜೋಡೊ ಯಾತ್ರೆಯ ಟ್ವಿಟರ್ ಹ್ಯಾಂಡಲ್‌ಗಳನ್ನು ತಾತ್ಕಾಲಿಕವಾಗಿ ನಿರ್ಬಂಧಿಸುವಂತೆ ಟ್ವಿಟರ್‌ಗೆ ನಿರ್ದೇಶಿಸಿದ್ದ ವಾಣಿಜ್ಯ ನ್ಯಾಯಾಲಯದ ಆದೇಶವನ್ನು ಕರ್ನಾಟಕ ಹೈಕೋರ್ಟ್ ಮಂಗಳವಾರ ರದ್ದುಪಡಿಸಿದೆ.

ಇದನ್ನೂ ಓದಿ: ಕಾಂಗ್ರೆಸ್ ಪಕ್ಷದ ಟ್ವಿಟರ್ ಬ್ಲಾಕ್ ಆದೇಶವನ್ನು ತಳ್ಳಿಹಾಕಿದ ಕರ್ನಾಟಕ ಹೈಕೋರ್ಟ್

Similar News