×
Ad

ಮಳಲಿ ಮಸೀದಿ ತೀರ್ಪು ಹಿನ್ನೆಲೆ: ಪೊಲೀಸ್ ಬಂದೋಬಸ್ತ್

Update: 2022-11-09 15:34 IST

ಮಂಗಳೂರು, ನ.8: ಮಳಲಿ ಮಸೀದಿ ಪ್ರಕರಣಕ್ಕೆ ಸಂಬಂಧಿಸಿದಂತೆ ದ.ಕ.ಜಿಲ್ಲಾ ಮೂರನೆ ಹೆಚ್ಚುವರಿ ಸಿವಿಲ್ ನ್ಯಾಯಾಲಯವು‌ ನೀಡಿದ ತೀರ್ಪಿನ ಹಿನ್ನೆಲೆಯಲ್ಲಿ ಮಸೀದಿಯ ಸುತ್ತಮುತ್ತಲಿನ ಪ್ರದೇಶದಲ್ಲಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಶಶಿಕುಮಾರ್ ‌ತಿಳಿಸಿದ್ದಾರೆ.

ಮಂಗಳೂರು ಉತ್ತರ ಉಪವಿಭಾಗದ ಎಸಿಪಿ ನೇತೃತ್ವದಲ್ಲಿ ಸಿಎಆರ್ ಮತ್ತು ಕೆಎಸ್ಸಾರ್ಪಿ ಪೊಲೀಸರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಬಂದೋಬಸ್ತ್ ನಡೆಸಲಾಗಿದೆ. ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ‌ ಮಳಲಿಗೆ ಭೇಟಿ ನೀಡಿ ಪರಿಶೀಲಿಸಲಿದ್ದಾರೆ. ಮಸೀದಿಯು ವಕ್ಫ್ ವ್ಯಾಪ್ತಿಗೆ ಬರುವುದರಿಂದ ಸಿವಿಲ್ ನ್ಯಾಯಾಲಯದಲ್ಲಿ ವಿಚಾರಣೆ ನಡೆಸುವಂತಿಲ್ಲ ಎಂದು‌ ಮಸೀದಿಯ ಪರ ವಕೀಲರು ಸಲ್ಲಿಸಿದ್ದ ಅರ್ಜಿಯನ್ನು ‌ತಿರಸ್ಕರಿಸಿ ಬುಧವಾರ ನ್ಯಾಯಾಲಯ ತೀರ್ಪು ನೀಡಿದೆ. ಆ ಹಿನ್ನಲೆಯಲ್ಲಿ‌ ಮುಂಜಾಗ್ರತಾ ಕ್ರಮವಾಗಿ‌ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

Similar News