ಬಿಎಸ್ ವೈ ಆಪ್ತ, ಮಾಜಿ ಶಾಸಕ ಯು.ಬಿ.ಬಣಕಾರ್ ಬಿಜೆಪಿಗೆ ರಾಜೀನಾಮೆ

Update: 2022-11-09 13:31 GMT

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಆಪ್ತ ಹಾಗೂ ಹಿರೇಕೆರೂರು ಕ್ಷೇತ್ರದ ಮಾಜಿ ಶಾಸಕ ಯು.ಬಿ.ಬಣಕಾರ್ ಅವರು ಬುಧವಾರ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.

ಹಿರೇಕೆರೂರು ಮಾಜಿ ಶಾಸಕ ಬಣಕಾರ್ ಅವರು ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ನಿರ್ದೇಶಕ ಸ್ಥಾನಕ್ಕೆ ಮತ್ತು ರಾಜ್ಯ ಉಗ್ರಾಣ ನಿಮಗಮದ ಅಧ್ಯಕ್ಷ ಸ್ಥಾನಕ್ಕೂ ರಾಜೀನಾಮೆ ನೀಡಿದ್ದಾರೆ. ಈ ಹಿಂದೆ ಅವರು ಬಿ.ಸಿ. ಪಾಟೀಲ್ ಅವರನ್ನು ಬಿಜೆಪಿಗೆ ಸೇರ್ಪಡೆ ಮಾಡಿಕೊಂಡಿದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದರು.

ನ.11 ರಂದು ಹಿರೇಕೆರೂರಿನಲ್ಲಿ ಬೆಂಬಲಿಗರ ಸಭೆ ನಡೆಸಿ ಮುಂದಿನ ನಿರ್ಧಾರ ಕೈಗೊಳ್ಳಲಿದ್ದೇನೆ ಎಂದು ಯು.ಬಿ.ಬಣಕಾರ್ ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಟಿಕೆಟ್ ಕೈ ತಪ್ಪಿದರೆ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕೆ: ಬಿಜೆಪಿ ನಾಯಕ ಯು.ಬಿ.ಬಣಕಾರ್

Similar News