×
Ad

ಸೋಮೇಶ್ವರ: ಸಿಸಿ ಕ್ಯಾಮರಾಕ್ಕೆ ಹಾನಿ ಮಾಡಿದ ಪ್ರಕರಣ; ಇಬ್ಬರು ಆರೋಪಿಗಳ ಬಂಧನ

Update: 2022-11-09 23:07 IST

ಉಳ್ಳಾಲ: ಸೋಮೇಶ್ವರದಲ್ಲಿ ಜಿಲ್ಲಾಡಳಿತ ನಿರ್ದೇಶನ ಮೇರೆಗೆ ಹಾಕಲಾಗಿದ್ದ ಸಿಸಿ ಕ್ಯಾಮರಾಕ್ಕೆ ಹಾನಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ತುಂಬಿನಾಡ್ ಮೂಲದ ದಿಶಾಂತ್ (21) ಮತ್ತು ರಕ್ಷಿತ್ (32) ಎಂದು ಗುರುತಿಸಲಾಗಿದೆ.

ಅವರು ಎರಡು ದಿನಗಳ ಹಿಂದೆ ಸೋಮೇಶ್ವರದಲ್ಲಿ ಮರಳು ಸಾಗಾಟ ಮಾಡುವ ಉದ್ದೇಶದಿಂದ ಸಿಸಿ ಕ್ಯಾಮರಾ ಕ್ಕೆ ಹಾನಿ ಮಾಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಅಕ್ರಮ ಮರಳು ಸಾಗಾಟ ತಡೆಯುವುದಕ್ಕಾಗಿ ದ.ಕ. ಜಿಲ್ಲಾಡಳಿತ ಕರಾವಳಿ ನಿಯಂತ್ರಣ ವಲಯದ ವ್ಯಾಪ್ತಿಯಲ್ಲಿ ಅಕ್ರಮ ಮರಳುಗಾರಿಕೆ ನಡೆಸದಂತೆ ಕಣ್ಗಾವಲಿಗೆ ಸಿಸಿ ಕ್ಯಾಮರಾ ಅಳವಡಿಸಿತ್ತು.

ಕೆಲ ತಿಂಗಳ ಹಿಂದೆ ತಂಡವೊಂದು ಸೋಮೇಶ್ವರ ಬೀಚ್ ನಲ್ಲಿ ಅಳವಡಿಸಿದ್ದ ಸಿಸಿ ಕ್ಯಾಮರಾವನ್ನು ಲಾರಿಯಿಂದ ಢಿಕ್ಕಿ ಹೊಡೆದು ಕೆಡವಲು ಯತ್ನಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕು ಮಂದಿಯನ್ನು ಬಂಧಿಸಲಾಗಿತ್ತು.

Similar News