ಟ್ವೆಂಟಿ-20 ವಿಶ್ವಕಪ್: ಇಂಗ್ಲೆಂಡ್ ಗೆಲುವಿಗೆ 169 ರನ್ ಸವಾಲು ನೀಡಿದ ಭಾರತ

ವಿರಾಟ್ ಕೊಹ್ಲಿ, ಹಾರ್ದಿಕ್ ಪಾಂಡ್ಯ ಅರ್ಧಶತಕ

Update: 2022-11-10 09:44 GMT

ಅಡಿಲೇಡ್: ಮಾಜಿ ನಾಯಕ ವಿರಾಟ್ ಕೊಹ್ಲಿ (50 ರನ್, 40 ಎಸೆತ, 4 ಬೌಂಡರಿ, 1 ಸಿಕ್ಸರ್) ಹಾಗೂ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ (63 ರನ್, 33 ಎಸೆತ, 4 ಬೌಂಡರಿ, 5 ಸಿಕ್ಸರ್) ಅವರ ಸಾಂದರ್ಭಿಕ ಬ್ಯಾಟಿಂಗ್ ನೆರವಿನಿಂದ ಭಾರತ  ಕ್ರಿಕೆಟ್ ತಂಡ ಟ್ವೆಂಟಿ-20 ವಿಶ್ವಕಪ್ ನಲ್ಲಿ 2ನೇ ಸೆಮಿ ಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ಗೆಲುವಿಗೆ 169 ರನ್ ಗುರಿ ನೀಡಿದೆ.

ಗುರುವಾರ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ್ದ ಭಾರತ ನಿಗದಿತ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 168 ರನ್ ಗಳಿಸಿತು.

ಇಂಗ್ಲೆಂಡ್ ಪರವಾಗಿ ಕ್ರಿಸ್ ಜೋರ್ಡನ್(3-43)ದುಬಾರಿಯಾದರೂ ಯಶಸ್ವಿ ಬೌಲರ್ ಎನಿಸಿಕೊಂಡರು. ಕ್ರಿಸ್ ವೋಕ್ಸ್ (1-24)ಹಾಗೂ ಆದಿಲ್ ರಶೀದ್ (1-20)ತಲಾ ಒಂದು ವಿಕೆಟ್ ಪಡೆದರು.

Similar News