ಟ್ವೆಂಟಿ-20 ವಿಶ್ವಕಪ್: ಭಾರತ ವಿರುದ್ಧ ಭರ್ಜರಿ ಜಯ ಸಾಧಿಸಿ ಫೈನಲ್ ತಲುಪಿದ ಇಂಗ್ಲೆಂಡ್
Update: 2022-11-10 16:35 IST
ಅಡಿಲೇಡ್: ಟ್ವೆಂಟಿ-20 ವಿಶ್ವಕಪ್ ಟೂರ್ನಿಯ ಎರಡನೇ ಸೆಮಿ ಫೈನಲ್ ನಲ್ಲಿ ಭಾರತ ಕ್ರಿಕೆಟ್ ತಂಡವನ್ನು 10 ವಿಕೆಟ್ ಗಳ ಅಂತರದಿಂದ ಭರ್ಜರಿಯಾಗಿ ಮಣಿಸಿದ ಇಂಗ್ಲೆಂಡ್ ಫೈನಲ್ ಗೆ ಪ್ರವೇಶಿಸಿದೆ.
ರವಿವಾರ ಮೆಲ್ಬೋರ್ನ್ ನಲ್ಲಿ ನಡೆಯಲಿರುವ ಫೈನಲ್ ನಲ್ಲಿ ಪಾಕಿಸ್ತಾನವನ್ನು ಇಂಗ್ಲೆಂಡ್ ಎದುರಿಸಲಿದೆ.
ಗುರುವಾರ ನಡೆದ ಪಂದ್ಯದಲ್ಲಿ 169 ರನ್ ಗುರಿ ಪಡೆದ ಇಂಗ್ಲೆಂಡ್ ವಿಕೆಟ್ ನಷ್ಟವಿಲ್ಲದೆ 16 ಓವರ್ ಗಳಲ್ಲಿ 170 ರನ್ ಗಳಿಸಿತು. ಜೋಸ್ ಬಟ್ಲರ್ (ಔಟಾಗದೆ 80 ರನ್, 49 ಎಸೆತ, 9 ಬೌಂಡರಿ, 3 ಸಿಕ್ಸರ್) ಹಾಗೂ ಹೇಲ್ಸ್ (ಔಟಾಗದೆ 86, 47 ಎಸೆತ, 4 ಬೌಂಡರಿ, 7 ಸಿಕ್ಸರ್) ಅರ್ಧಶತಕ ಸಿಡಿಸಿ ಅಮೋಘ ಪ್ರದರ್ಶನ ನೀಡಿದರು.
ಮೊದಲು ಬ್ಯಾಟಿಂಗ್ ಮಾಡಿದ್ದ ಭಾರತವು 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 168 ರನ್ ಗಳಿಸಿತ್ತು.