PSI ನೇಮಕಾತಿ ಹಗರಣ: ಅಮೃತ್ ಪೌಲ್ ಮನೆಯಲ್ಲಿ ಈ.ಡಿ ಶೋಧ

Update: 2022-11-10 12:30 GMT

ಬೆಂಗಳೂರು, ನ.10:ಪಿಎಸ್ಸೈ ನೇಮಕಾತಿ ಪರೀಕ್ಷೆ ಅಕ್ರಮ ಪ್ರಕರಣ ಸಂಬಂಧ ಹಿರಿಯ ಐಪಿಎಸ್ ಅಧಿಕಾರಿ ಅಮೃತ್‍ ಪೌಲ್  ಹಾಗೂ ಡಿವೈಎಸ್ಪಿ ಶಾಂತಕುಮಾರ್ ಮನೆ ಸೇರಿ 11 ಕಡೆಗಳಲ್ಲಿ ಜಾರಿ ನಿರ್ದೇಶನಾಲಯ (ಈಡಿ) ಅಧಿಕಾರಿಗಳು ಶೋಧ ಕಾರ್ಯ ಕೈಗೊಂಡಿದ್ದಾರೆ.

ಇಲ್ಲಿನ ಸಹಕಾರ ನಗರದಲ್ಲಿರುವ ಅಮೃತ್ ಪಾಲ್ ಹಾಗೂ ಆಡುಗೋಡಿಯ ಟೆಕ್ನಿಕಲ್ ಸೆಂಟರ್ ನಲ್ಲಿರುವ ಶಾಂತಕುಮಾರ್ ಮನೆಗಳಲ್ಲಿ ಗುರುವಾರ ಮುಂಜಾನೆ ದಾಳಿ ನಡೆಸಿ ಶೋಧ ನಡೆಸಿದ ಈಡಿ ಅಧಿಕಾರಿಗಳು, ಕೆಲ ದಾಖಲೆಗಳನ್ನು ಜಪ್ತಿ ಮಾಡಿದರು.

Similar News