ಆಯುಷ್ಮಾನ್ ಭಾರತ್ ನೊಂದಣಿಗೆ ಸೂಚನೆ
Update: 2022-11-10 18:46 IST
ಉಡುಪಿ : ಕೇಂದ್ರ ಸರಕಾರವು ಸಾರ್ವಜನಿಕರ ಆರೋಗ್ಯದ ಹಿತದೃಷ್ಠಿಯಿಂದ ಆಯುಷ್ಮಾನ್ ಭಾರತ್-ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆಯನ್ನು (ಪಿಎಂಜೆಎವೈ) ಜಾರಿಗೆ ತಂದಿದೆ.
ಈಗಾಗಲೇ ಈ ಕಾರ್ಡಿನ ನೊಂದಣಿ ಪ್ರಕ್ರಿಯೆಯು ಆರಂಭವಾಗಿದ್ದು ಆಯುಷ್ಮಾನ್ ಭಾರತ್-ಪ್ರಧಾನಮಂತ್ರಿ ಜನಾರೋಗ್ಯ ಕಾರ್ಡ್‌ಗಳನ್ನು ನೊಂದಣಿ ಮಾಡುವ ಬಗ್ಗೆ ಜಿಲ್ಲೆಯಾದ್ಯಂತ ವಿಶೇಷ ನೊಂದಣಿ ಆಂದೋಲನವನ್ನು ಹಮ್ಮಿಕೊಳ್ಳಲಾಗಿದೆ.
ಸಾರ್ವಜನಿಕರು ತಮ್ಮ ತಮ್ಮ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಗ್ರಾಮ ಒನ್ ಕೇಂದ್ರಗಳಿಗೆ ತಮ್ಮ ಆಧಾರ್ ನೊಂದಾಯಿತ ಮೊಬೈಲ್ ನಂಬರ್ ಅಥವಾ ರೇಶನ್ ಕಾರ್ಡಿನೊಂದಿಗೆ ಭೇಟಿ ನೀಡಿ ಹೆಚ್ಚಿನ ಸಂಖ್ಯೆಯಲ್ಲಿ ಉಚಿತವಾಗಿ ಆಯುಷ್ಮಾನ್ ಭಾರತ್ ಪ್ರಧಾನಮಂತ್ರಿ ಜನಾರೋಗ್ಯ ಕಾರ್ಡ್‌ನ್ನು ನೊಂದಣಿ ಮಾಡಿಕೊಂಡು ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ಪ್ರಕಟಣೆಯಲ್ಲಿ ಕೋರಲಾಗಿದೆ.