×
Ad

ಡಿಸೆಂಬರ್ ಅಂತ್ಯದೊಳಗೆ ಬೆಳೆ ವಿಮೆ ಪರಿಹಾರ ಇತ್ಯರ್ಥ: ಸಚಿವ ಬಿ.ಸಿ.ಪಾಟೀಲ್

Update: 2022-11-10 19:43 IST

ಬೆಂಗಳೂರು, ನ.10: 2022-23ನೇ ಸಾಲಿನ ಪೂರ್ವ ಮುಂಗಾರು ಹಂಗಾಮಿನ ರೈತರ ಬೆಳೆ ವಿಮೆ ಪರಿಹಾರವನ್ನು ಡಿಸೆಂಬರ್ ಅಂತ್ಯದೊಳಗೆ ಇತ್ಯರ್ಥ ಪಡಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಕೃಷಿ ಸಚಿವ ಬಿ.ಸಿ.ಪಾಟೀಲ್ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. 

ಗುರುವಾರ ವಿಕಾಸಸೌಧದಲ್ಲಿ ಬೆಳೆವಿಮೆ ಪರಿಹಾರ ಇತ್ಯರ್ಥ ಸಂಬಂಧ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, 2022-23ನೇ ಸಾಲಿನ ಬೆಳೆ ವಿಮೆ ಇತ್ಯರ್ಥ ಸಂಬಂಧ ಕೈಗೊಂಡ ಕ್ರಮಗಳ ಬಗ್ಗೆ ಅಧಿಕಾರಿಗಳೊಂದಿಗೆ ಮಾಹಿತಿ ಪಡೆದುಕೊಂಡರು.

ಯಾವುದೇ ಕಾರಣಕ್ಕೂ ಬೆಳೆವಿಮೆ ಪರಿಹಾರ ತಡವಾಗಬಾರದು. ರೈತರು ವಿಮೆಗಾಗಿ ಕಾದುಕುಳಿತಿರುತ್ತಾರೆ. ಸಂಬಂಧಿಸಿದ ವಿಮೆ ಕಂಪೆನಿಗಳೊಂದಿಗೆ ನಿರಂತರ ಸಂಪರ್ಕವನ್ನು ಕೃಷಿ ಅಧಿಕಾರಿಗಳು ಹೊಂದಿರಬೇಕು ಎಂದ ಅವರು, ಆಧಾರ್  ಕಾರ್ಡ್ ಲಿಂಕ್ ಆಗದ ಇನ್ನೂ ಹೆಚ್ಚಿನ ರೈತರಿದ್ದು, ಆದಷ್ಟು ಬೇಗ ರೈತರು ಆಧಾರ್ ಕಾರ್ಡ್ ಬೆಳೆವಿಮೆಗೆ ಸರಿಯಾಗಿ ಲಿಂಕ್ ಆಗಿದಿಯೇ ಎಂಬುದನ್ನು ಪರಿಶೀಲಿಸಬೇಕು ಎಂದರು.

ಮುಂಗಾರು ಹಂಗಾಮಿನ ಬೆಳೆಗಳಿಗೆ ಜನವರಿಯಲ್ಲಿ ವಿಮೆ ಪರಿಹಾರ ಇತ್ಯರ್ಥಪಡಿಸಲು ಪ್ರಕ್ರಿಯೆ ಆರಂಭಿಸುವಂತೆ ಅವರು ಸೂಚಿಸಿದರು. ಸಭೆಯಲ್ಲಿ ಕೃಷಿ ಇಲಾಖೆಯ ಕಾರ್ಯದರ್ಶಿ ಶಿವಯೋಗಿ ಕಳಸದ, ಆಯುಕ್ತ ಶರತ್ ಪಿ, ಬೆಳೆ ವಿಮೆ ಜಂಟಿ ಕೃಷಿ ನಿರ್ದೇಶಕ  ಜಯಸ್ವಾಮಿ ಸೇರಿದಂತೆ ಮತ್ತಿತ್ತರ ಪ್ರಮುಖ ಅಧಿಕಾರಿಗಳು ಪಾಲ್ಗೊಂಡಿದ್ದರು.

Similar News