ವಿಶೇಷ ಪ್ರೋತ್ಸಾಹ ಧನಕ್ಕೆ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

Update: 2022-11-10 15:57 GMT

ಬೆಂಗಳೂರು, ನ. 10: ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಬಿ.ಎಡ್ ಮತ್ತು ಡಿ.ಎಡ್‍ನಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹ ಧನ ನೀಡಲು ಆನ್‍ಲೈನ್‍ ಅರ್ಜಿ ಆಹ್ವಾನಿಸಿದ್ದು, ಡಿ.10ರೊಳಗೆ ಸೇವಾ ಸಿಂಧು ಪೋರ್ಟ್‍ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು ತಿಳಿಸಿದೆ.

ಮುಸ್ಲಿಮ್, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ ಮತ್ತು ಪಾರ್ಸಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಸರಕಾರಿ ಕಾಲೇಜಿನಲ್ಲಿ ದಾಖಲಾತಿ ಪಡೆದ ಬಿ.ಎಡ್ ಮತ್ತು ಡಿ.ಎಡ್ ವಿದ್ಯಾರ್ಥಿಗಳಿಗೆ 25 ಸಾವಿರ ರೂ.ಪ್ರೋತ್ಸಾಹ ಧನವನ್ನು ನೀಡಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಸೇವಾಸಿಂಧು ವೆಬ್‍ಸೈಟ್ https://sevasindhu.karnataka.gov.in/​  ಅಥವಾ ದೂರವಾಣಿ ಸಂಖ್ಯೆ 8277799990 ಗೆ ಸಂಪರ್ಕಿಸಬಹುದಾಗಿದೆ.

Similar News