ಚೆನ್ನೈ: ರಾತ್ರಿ ಇಡೀ ಸುರಿದ ಭಾರೀ ಮಳೆ, ಕೆಲವು ಭಾಗ ಜಲಾವೃತ, ಶಾಲಾ-ಕಾಲೇಜುಗಳಿಗೆ ರಜೆ

Update: 2022-11-11 04:48 GMT

ಚೆನ್ನೈ: ರಾತ್ರಿಯಿಡೀ ಸುರಿದ ಭಾರೀ ಮಳೆಯಿಂದಾಗಿ ಚೆನ್ನೈನ ಕೆಲವು ಭಾಗಗಳಲ್ಲಿ ಶುಕ್ರವಾರ ಜಲಾವೃತವಾಗಿದ್ದು, ಹವಾಮಾನ ಪರಿಸ್ಥಿತಿಯ ದೃಷ್ಟಿಯಿಂದ ತಮಿಳುನಾಡು ಹಾಗೂ  ಪುದುಚೇರಿಯ 14 ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ.

ಹವಾಮಾನ ಇಲಾಖೆಯು ರಾಜ್ಯದ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ ಹಾಗೂ  ಅಧಿಕಾರಿಗಳು ಚೆನ್ನೈನಲ್ಲಿ 169 ಸೇರಿದಂತೆ 5,093 ಪರಿಹಾರ ಶಿಬಿರಗಳನ್ನು ಸ್ಥಾಪಿಸಿದ್ದಾರೆ.

ನಗರದ ತಗ್ಗು ಪ್ರದೇಶಗಳಲ್ಲಿ 879 ಒಳಚರಂಡಿ ಪಂಪ್‌ಗಳನ್ನು ನಿಯೋಜಿಸಲಾಗಿದೆ ಹಾಗೂ  60 ಮೇಲ್ವಿಚಾರಣಾ ಅಧಿಕಾರಿಗಳು ಪೀಡಿತ ಜಿಲ್ಲೆಗಳ ಉಸ್ತುವಾರಿ ವಹಿಸಿದ್ದಾರೆ.

ಕೇಂದ್ರ ಹಾಗೂ  ರಾಜ್ಯ ವಿಪತ್ತು ಪ್ರತಿಕ್ರಿಯೆ ಪಡೆಗಳ 2,000 ಕ್ಕೂ ಹೆಚ್ಚು ಪರಿಹಾರ ಸಿಬ್ಬಂದಿ ಸರ್ವ ಸನ್ನದ್ಧರಾಗಿದ್ದಾರೆ.

Similar News