ಕನಕದಾಸ, ಮಹರ್ಷಿ ವಾಲ್ಮೀಕಿ ಪ್ರತಿಮೆಗಳಿಗೆ ಪುಷ್ಪನಮನ ಸಲ್ಲಿಸಿದ ಮೋದಿ

Update: 2022-11-11 05:27 GMT

ಬೆಂಗಳೂರು: ಶಾಸಕರ ಭವನದ ಅವರಣದಲ್ಲಿರುವ ಸಂತ ಶ್ರೇಷ್ಠ ಕನಕದಾಸ ಹಾಗೂ ಮಹರ್ಷಿ ವಾಲ್ಮೀಕಿ ಪ್ರತಿಮೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಮಾಲಾರ್ಪಣೆ ಮಾಡಿ ಪುಷ್ಪ ನಮನ ಸಲ್ಲಿಸಿದರು.

ಶುಕ್ರವಾರ ಬೆಳಿಗ್ಗೆ ವಿಶೇಷ ವಿಮಾನದಲ್ಲಿ ಬೆಳಿಗ್ಗೆ ಬೆಂಗಳೂರಿನ ಎಚ್‌ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಧಾನಿ ಮೋದಿ, ರಸ್ತೆ ಮೂಲಕ ವಿಧಾನಸೌಧದ ಶಾಸಕರ ಭವನಕ್ಕೆ ಆಗಮಿಸಿದರು.  

ಶಾಸಕರ ಭವನದ ಅವರಣದಲ್ಲಿರುವ ಸಂತ ಶ್ರೇಷ್ಠ ಕನಕದಾಸ ಹಾಗೂ ಮಹರ್ಷಿ ವಾಲ್ಮೀಕಿ ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡಿ ಪುಷ್ಪ ನಮನ ಸಲ್ಲಿಸಿದರು.

ಅಲ್ಲಿಂದ ನೇರವಾಗಿ ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲುನಿಲ್ದಾಣಕ್ಕೆ ಆಗಮಿಸಲಿರುವ ಮೋದಿ, ವಂದೇ ಮಾತರಂ ಮತ್ತು ಭಾರತ್ ಗೌರವ್ ಕಾಶಿದರ್ಶನ್ ರೈಲುಗಳ ಸಂಚಾರಕ್ಕೆ ಹಸಿರು ನಿಶಾನೆ ತೋರುವರು. ರೈಲು ನಿಲ್ದಾಣದಿಂದ ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನನಿಲ್ದಾಣಕ್ಕೆ ತೆರಳಿ ಅಲ್ಲಿ ವಿಮಾನ ನಿಲ್ದಾಣದ 2ನೇ ಟರ್ಮಿನಲ್‌ನ್ನು ಉದ್ಘಾಟಿಸಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸ್ಥಾಪಿಸಲಾಗಿರುವ ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಕಂಚಿನ ಪ್ರತಿಮೆಯನ್ನು ಅನಾವರಣಗೊಳಿಸುವರು. ಇದಾದ ನಂತರ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಪ್ರಧಾನಿಗಳು ಮಾತನಾಡಲಿದ್ದಾರೆ.

Similar News