×
Ad

ಜೆಎನ್ ಯು ಕ್ಯಾಂಪಸ್ ನಲ್ಲಿ ಮಾರಾಮಾರಿ ಪ್ರಕರಣ: 2 ಪ್ರತ್ಯೇಕ ಎಫ್ ಐಆರ್ ದಾಖಲಿಸಿದ ದಿಲ್ಲಿ ಪೊಲೀಸರು

Update: 2022-11-11 12:09 IST

ಹೊಸದಿಲ್ಲಿ: ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ (ಜೆಎನ್‌ಯು) ಕ್ಯಾಂಪಸ್‌ನಲ್ಲಿ ಎರಡು ವಿದ್ಯಾರ್ಥಿ ಗುಂಪುಗಳ ನಡುವೆ ನಡೆದ ಮಾರಾಮಾರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಎರಡು ಪ್ರತ್ಯೇಕ ಎಫ್‌ಐಆರ್‌ಗಳನ್ನು ದಾಖಲಿಸಿದ್ದಾರೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.

ಗುರುವಾರ ನಡೆದ ಘರ್ಷಣೆಯಲ್ಲಿ ಇಬ್ಬರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದರೆ, ವಿಶ್ವವಿದ್ಯಾಲಯದ ಮೂಲಗಳು ಒಬ್ಬ ವಿದ್ಯಾರ್ಥಿಗೆ ಮಾತ್ರ ಗಾಯವಾಗಿದೆ ಎಂದು ಹೇಳಿದೆ.

ನರ್ಮದಾ ಹಾಸ್ಟೆಲ್ ಬಳಿ ನಡೆದ ಗಲಾಟೆ ಬುಧವಾರ ಹುಟ್ಟುಹಬ್ಬದ ಪಾರ್ಟಿಯಲ್ಲಿ ನಡೆದ ಘಟನೆಗಳ ಪರಿಣಾಮವಾಗಿದೆ ಎಂದು ಮೂಲಗಳು ತಿಳಿಸಿವೆ.

''ಜೆಎನ್‌ಯು ವಿದ್ಯಾರ್ಥಿ ನಿಶಾಂತ್ ನಗರ್ ಅವರ ದೂರಿನ ಮೇರೆಗೆ, ಭಾರತೀಯ ದಂಡ ಸಂಹಿತೆ ಸೆಕ್ಷನ್ 323, 341 ಹಾಗೂ  34 ರ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ.  ಜೆಎನ್‌ಯು ವಿದ್ಯಾರ್ಥಿ ಕಾರ್ತಿಕ್‌ನ ದೂರಿನ ಮೇರೆಗೆ ವಸಂತ್ ಕುಂಜ್ ಉತ್ತರ ಪೊಲೀಸ್ ಠಾಣೆಯಲ್ಲಿ ಇದೇ ರೀತಿಯ ಸೆಕ್ಷನ್‌ಗಳ ಅಡಿಯಲ್ಲಿ ಎರಡನೇ ಎಫ್‌ಐಆರ್ ದಾಖಲಿಸಲಾಗಿದೆ ಹಾಗು ಹೆಚ್ಚಿನ ತನಿಖೆ ನಡೆಯುತ್ತಿದೆ’’ ಎಂದು ಡೆಪ್ಯುಟಿ ಕಮಿಷನರ್ ಆಫ್ ಪೊಲೀಸ್ (ನೈಋತ್ಯ) ಮನೋಜ್ ಸಿ ಹೇಳಿದ್ದಾರೆ.

Similar News