2ನೇ ಪೊಕ್ಸೊ ಪ್ರಕರಣ: ಮುರುಘಾಶ್ರೀ ವಿರುದ್ಧ ದೂರು ನೀಡಿದ್ದ ಸಂತ್ರಸ್ತ ವಿದ್ಯಾರ್ಥಿನಿಯರ ತಾಯಿ ಬಂಧನ

Update: 2022-11-11 17:58 GMT

ಬೆಂಗಳೂರು, ನ.11: ಪೊಕ್ಸೊ, ಎಸ್ಸಿ-ಎಸ್ಟಿ ದೌರ್ಜನ್ಯ ತಡೆ ಕಾಯ್ದೆ ಆರೋಪದಡಿ ಕಾರಾಗೃಹದಲ್ಲಿರುವ ಚಿತ್ರದುರ್ಗ ಮುರುಘಾ ಮಠದ  ಶಿವಮೂರ್ತಿ ಶರಣರ ವಿರುದ್ಧ ಎರಡನೇ ಪೋಕ್ಸೊ ಪ್ರಕರಣ ದಾಖಲಿಸಿದ ಇಬ್ಬರು ಸಂತ್ರಸ್ತ ವಿದ್ಯಾರ್ಥಿನಿಯರ ತಾಯಿಯನ್ನು ಪೊಲೀಸರು ಬಂಧಿಸಿರುವುದಾಗಿ ವರದಿಯಾಗಿದೆ.  

ಮಠದಲ್ಲಿ ಅಡುಗೆ ಸಹಾಯಕಿಯಾಗಿದ್ದರೆನ್ನಲಾದ ಬಂಧಿತ ಮಹಿಳೆ,  ಶರಣರ ವಿರುದ್ಧ ಹೇಳಿಕೆ ನೀಡುವಂತೆ ಮಠದ ಹಾಸ್ಟೆಲ್‌ನಲ್ಲಿ ವ್ಯಾಸಂಗ ಮಾಡುತ್ತಿದ್ದ ತನ್ನ ಪುತ್ರಿಯರಿಗೆ ಕುಮ್ಮಕ್ಕು ನೀಡಿದ್ದರು ಎಂದು ಆರೋಪಿಸಲಾಗಿದೆ. 

ಮುರುಘಾಮಠದ ಉಸ್ತುವಾರಿ ಬಸವಪ್ರಭುಶ್ರೀ ದಾಖಲಿಸಿದ್ದ ದೂರು ಆಧರಿಸಿ ನಿನ್ನೆ ಮೈಸೂರಿನ ಒಡನಾಡಿ ಸಂಸ್ಥೆಯಿಂದ ಮಹಿಳೆಯನ್ನು  ಕರೆತಂದಿದ್ದ ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರು ವಿಚಾರಣೆ ನಡೆಸಿ, ಬಂಧನಕ್ಕೊಳಪಡಿಸಿದ್ದಾರೆ ಎಂದು ತಿಳಿದು ಬಂದಿದೆ. 

ಇದನ್ನೂ ಓದಿ... ಆದಿಚುಂಚನಗಿರಿ ಶ್ರೀಗಳ ಹೆಗಲ ಮೇಲೆ ಕೈ ಹಾಕಿದ ಸಚಿವ ಅಶೋಕ್: ಫೋಟೋ ವೈರಲ್, ಸಾಮಾಜಿಕ ಜಾಲತಾಣದಲ್ಲಿ ಟೀಕೆ

Similar News