ರಾಜ್ಯದ ಪ್ರಗತಿಗೆ ಕೊಡುಗೆ ನೀಡಿ: ಹಿಮಾಚಲ ಮತದಾರರಿಗೆ ರಾಹುಲ್ ಗಾಂಧಿ ವಿನಂತಿ

Update: 2022-11-12 07:33 GMT

ಹೊಸದಿಲ್ಲಿ: ರಾಜ್ಯದ ಪ್ರಗತಿಗೆ ಕೊಡುಗೆ ನೀಡಿ ಎಂದು ಕಾಂಗ್ರೆಸ್ ಪಕ್ಷದ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಇಂದು ಮತದಾರರಿಗೆ ಮನವಿ ಮಾಡಿದ್ದಾರೆ.

ಇಂದು ಬೆಳಗ್ಗೆ ಆರಂಭವಾಗಿರುವ ಹಿಮಾಚಲ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ  ಬಿಜೆಪಿ ನಡುವೆ ನೇರ ಪೈಪೋಟಿ ಏರ್ಪಟ್ಟಿದೆ.

"ಹಿಮಾಚಲವು ಹಳೆಯ ಪಿಂಚಣಿ ಯೋಜನೆಗಾಗಿ (OPS), ಹಿಮಾಚಲವು ಉದ್ಯೋಗಕ್ಕಾಗಿ,  ಹಿಮಾಚಲವು 'ಹರ್ ಘರ್ ಲಕ್ಷ್ಮಿ'ಗೆ ತ ಮತ ಚಲಾಯಿಸುತ್ತದೆ. ಬನ್ನಿ, ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸಿ ಹಾಗೂ  ಹಿಮಾಚಲದ ಪ್ರಗತಿ ಮತ್ತು ಸಮೃದ್ಧ ಭವಿಷ್ಯಕ್ಕಾಗಿ ನಿಮ್ಮ ಅಮೂಲ್ಯ ಕೊಡುಗೆ ನೀಡಿ " ಎಂದು ರಾಹುಲ್  ಗಾಂಧಿ ಟ್ವಿಟರ್‌ನಲ್ಲಿ ಬರೆದಿದ್ದಾರೆ.

ಹಿಮಾಚಲ ಪ್ರದೇಶದ 68 ವಿಧಾನಸಭಾ ಕ್ಷೇತ್ರಗಳಲ್ಲಿ 55 ಲಕ್ಷಕ್ಕೂ ಹೆಚ್ಚು ಮತದಾರರು ಮತ ಚಲಾಯಿಸಲಿದ್ದಾರೆ. ಕಾಂಗ್ರೆಸ್ ಮತ್ತೆ ರಾಜ್ಯದಲ್ಲಿ ಅಧಿಕಾರಕ್ಕೆ ಬರಲು ಪ್ರಯತ್ನಿಸುತ್ತಿದ್ದರೆ, ತನ್ನ ಸ್ಥಾನವನ್ನು ಉಳಿಸಿಕೊಳ್ಳಲು ಬಿಜೆಪಿ ಪ್ರಯತ್ನಿಸುತ್ತಿದೆ.

Similar News