ಕೆಲವು ಬಂಡಾಯ ಶಾಸಕರು ಪಕ್ಷಕ್ಕೆ ಮರಳಲಿದ್ದಾರೆ: ಶಿವಸೇನೆ ನಾಯಕ ಸಂಜಯ್ ರಾವುತ್

Update: 2022-11-12 08:32 GMT

ಮುಂಬೈ: ಕೆಲವು ಬಂಡಾಯ ಶಾಸಕರು ಪಕ್ಷಕ್ಕೆ ಮರಳಲಿದ್ದಾರೆ ಎಂದು ಶಿವಸೇನೆ (ಉದ್ಧವ್ ಬಾಳಾಸಾಹೇಬ್ ಠಾಕ್ರೆ) ನಾಯಕ ಸಂಜಯ್ ರಾವುತ್ Sanjay Raut ಶುಕ್ರವಾರ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾದ ಎರಡು ದಿನಗಳ ನಂತರ ಮರಾಠಿ ಸುದ್ದಿ ವಾಹಿನಿ ABP Majha ನೊಂದಿಗೆ ಮಾತನಾಡಿದ ರಾವುತ್, ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಾಧೀಶರ "ಪೀಠ" ಅಥವಾ ವಿರೋಧ ಪಕ್ಷದ ಸದಸ್ಯರ ಹೆಚ್ಚಿನ ಪ್ರಾತಿನಿಧ್ಯವನ್ನು ಹೊಂದಿರುವ ಜಂಟಿ ಸಂಸದೀಯ ಸಮಿತಿಯು ಪಿಎಂಎಲ್‌ಎನಂತಹ ಎಲ್ಲಾ ಪ್ರಕರಣಗಳನ್ನು ಪರಿಶೀಲಿಸಬೇಕು ಎಂದು ಹೇಳಿದರು.

"ಬಂಡಾಯ ಎದ್ದಿರುವ  ಕೆಲವು ಶಾಸಕರು ಖಂಡಿತವಾಗಿಯೂ ಹಿಂತಿರುಗುತ್ತಾರೆ. ಕೆಲವರು ಹಿಂತಿರುಗುತ್ತಾರೆ ಎಂದು ನನಗೆ ವಿಶ್ವಾಸವಿದೆ'' ಎಂದು ರಾವುತ್ ಸುದ್ದಿವಾಹಿನಿಗೆ ತಿಳಿಸಿದರು.

ಹಾಲಿ  ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಸೇರಿದಂತೆ ಸುಮಾರು 40 ಶಿವಸೇನೆ ಶಾಸಕರು ಜೂನ್‌ನಲ್ಲಿ ಪಕ್ಷದ ನಾಯಕತ್ವದ ವಿರುದ್ಧ ಬಂಡಾಯವೆದ್ದು ಉದ್ಧವ್ ಠಾಕ್ರೆ ನೇತೃತ್ವದ ಸರಕಾರ ಪತನಕ್ಕೆ ಕಾರಣವಾಗಿದ್ದರು.

Similar News