ಬೆಂಗಳೂರು | ರಸ್ತೆ ಗುಂಡಿಗೆ ಬಿದ್ದ ಬೈಕ್ ಸವಾರ; ಅರ್ಧ ದಿನ ಬಿದ್ದ ಸ್ಥಳದಲ್ಲೇ ಪ್ರತಿಭಟನೆ!

ವಿಡಿಯೋ ವೈರಲ್

Update: 2022-11-12 14:34 GMT

ಬೆಂಗಳೂರು: ನಗರದ ರಸ್ತೆ ಗುಂಡಿಯಿಂದಾಗಿ (Pat hole) ದಿನ ನಿತ್ಯ ವಾಹ ಸವಾರರು ಪರದಾಡುವಂತಾಗಿದ್ದು, ನಗರದ ಹಲಸೂರಿನಲ್ಲಿನ ರಸ್ತೆ ಗುಂಡಿಗೆ ಬಿದ್ದ ಬೈಕ್ ಸವಾರನೋರ್ವ ಸುಮಾರು ಅರ್ಧ ದಿನ ಬಿದ್ದ ಜಾಗದಲ್ಲೇ ಕುಳಿತು ಪ್ರತಿಭಟನೆ ನಡೆಸಿ, ಆಕ್ರೋಶ ವ್ಯಕ್ತಪಡಿಸಿದ್ದಾರೆ.  

ಈ ಕುರಿತ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಅದನ್ನು ಟ್ವಿಟರ್ ನಲ್ಲಿ ಹಂಚಿಕೊಂಡಿರುವ ಕಾಂಗ್ರೆಸ್, ಬಿಜೆಪಿ ಆಡಳಿತದ ವಿರುದ್ಧ ಕಿಡಿಕಾರಿದೆ. 

''ಮೋದಿ ಭೇಟಿಗಾಗಿ ತೇಪೆ ಹಾಕುವ ಸರ್ಕಾರ ಜನ ಸಾಯುತ್ತಿದ್ದರೂ ಗುಂಡಿ ಮುಚ್ಚುವುದಿಲ್ಲವೇಕೆ? ಜನರ ಹಿತ ಬಿಜೆಪಿಗೆ ಬೇಕಿಲ್ಲವೇ? "ಮಾನ, ಮರ್ಯಾದೆ, ನಾಚಿಕೆ" ಈ ಮೂರನ್ನೂ ಬಿಟ್ಟಿದೆ'' ಎಂದು ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ. 

► ಉತ್ತಮ ರಸ್ತೆಗಾಗಿ ಮೇಣದಬತ್ತಿ ಹಿಡಿದು ಮೌನ ಪ್ರತಿಭಟನೆ

ಮಹದೇವಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಣತ್ತೂರು ಪ್ರದೇಶದ ವಿದ್ಯಾರ್ಥಿಗಳು ಮತ್ತು ಪೋಷಕರು ಉತ್ತಮ ರಸ್ತೆಗಾಗಿ ಮೇಣದಬತ್ತಿ ಮತ್ತು ಮೊಬೈಲ್‌ ಟಾರ್ಚ್‌ಗಳನ್ನು ಹಿಡಿದು ಬುಧವಾರ ರಾತ್ರಿ ಮೌನ ಪ್ರತಿಭಟನೆ ನಡೆಸಿದ್ದರು. ಈ ಪ್ರತಿಭಟನೆಯ ವಿಡಿಯೋ ಕೂಡ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. 

Similar News