ನೆಲ್ಯಾಡಿ: ಟ್ರೈಲರ್‌ ಪಲ್ಟಿ; ಸಂಚಾರಕ್ಕೆ ತಡೆ

Update: 2022-11-12 17:08 GMT

ಉಪ್ಪಿನಂಗಡಿ: ನೆಲ್ಯಾಡಿಯ ಹೊಸಮಜಲು ಎಂಬಲ್ಲಿ ಕಬ್ಬಿಣದ ಸರಳುಗಳನ್ನು ಹೇರಿಕೊಂಡು ಹೋಗುತ್ತಿದ್ದ ಟ್ರೈಲರ್‌ ನಿಯಂತ್ರಣ ತಪ್ಪಿ ರಸ್ತೆಗೆ ಅಡ್ಡವಾಗಿ ಮಗುಚಿ ಬಿದ್ದ ಪರಿಣಾಮ ಕೆಲವೊತ್ತು ಹೆದ್ದಾರಿ ಸಂಚಾರಕ್ಕೆ ತಡೆಯಾದ ಘಟನೆ ಇಂದು ರಾತ್ರಿ ನಡೆದಿದೆ.

ಟ್ರೈಲರ್‌ ನಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

ನೆಲ್ಯಾಡಿ ಹೊರಠಾಣೆ ಪೊಲೀಸರು ಘಟನಾ ಸ್ಥಳಕೆ ತೆರಳಿ ಟ್ರೈಲರ್‌ ತೆರವು ಕಾರ್ಯಾಚರಣೆ ನಡೆಸಿ, ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು. 

Similar News