ಜಿಪಂ-ತಾಪಂ ಚುನಾವಣೆ: ಹೈಕೋರ್ಟ್ ಆದೇಶ ಪಾಲಿಸಲು ರಾಜ್ಯ ಚುನಾವಣಾ ಆಯೋಗಕ್ಕೆ ಸುಪ್ರೀಂ ನಿರ್ದೇಶ

Update: 2022-11-12 17:31 GMT

ಬೆಂಗಳೂರು, ನ. 12: ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ನಡೆಸಲು ಹೈಕೋರ್ಟ್ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದ ರಾಜ್ಯ ಚುನಾವಣಾ ಆಯೋಗಕ್ಕೆ ಹಿನ್ನಡೆಯಾದಂತೆ ಆಗಿದೆ.

ಶನಿವಾರ ನ್ಯಾಯಮೂರ್ತಿ ಅನಿರುದ್ಧ್ ನೇತೃತ್ವದ ಸುಪ್ರೀಂ ಕೋರ್ಟ್ (Supreme Court of India) ವಿಭಾಗೀಯ ಪೀಠ, ಹೈಕೋರ್ಟ್ (high court of karnataka) ಆದೇಶವನ್ನು ಪಾಲಿಸುವಂತೆ ನಿರ್ದೇಶನ ನೀಡಿದೆ. 

ಮೇ ತಿಂಗಳಲ್ಲಿ ನಿಗದಿಯಾಗಿದ್ದ ಚುನಾವಣೆಯನ್ನು ನಡೆಸುವ ಕುರಿತು ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ರಾಜ್ಯ ಚುನಾವಣಾ ಆಯೋಗ ಸಲ್ಲಿಸಿದ್ದ ಮನವಿಯನ್ನು ಸುಪ್ರೀಂ ಕೋರ್ಟ್ ಪರಿಗಣಿಸಲಿಲ್ಲ. 

ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಅರ್ಜಿಯು ಹೈಕೋರ್ಟ್‌ನಲ್ಲಿ ಇತ್ಯರ್ಥಕ್ಕೆ ಬಾಕಿ ಇರುವಾಗ ಮದ್ಯಪ್ರವೇಶಿಸುವುದಿಲ್ಲ ಎಂದು ಸ್ಪಷ್ಟನೆ ನೀಡಿದೆ.

ಕ್ಷೇತ್ರ ವಿಂಗಡಣೆ ಮತ್ತು ಮೀಸಲಾತಿಯನ್ನು ಪೂರ್ಣಗೊಳಿಸಲು ಹೈಕೋರ್ಟ್ ರಾಜ್ಯ ಸರಕಾರಕ್ಕೆ 12 ವಾರಗಳ ಕಾಲಾವಕಾಶ ನೀಡಿದ್ದು, ಇನ್ನು ಕೆಲ ದಿನಗಳಲ್ಲಿ ಅದು ಮುಕ್ತಾಯಗೊಳ್ಳಲಿದೆ. ಈ ಸಂಬಂಧ ಮತ್ತೆ ಹೈಕೋರ್ಟ್ ಗೆ ಹೋಗುವಂತೆ ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.

Similar News