×
Ad

ಶಾಸಕ ಪ್ರಿಯಾಂಕ್ ಖರ್ಗೆಗೆ ಕೊಲೆ ಬೆದರಿಕೆ ಪ್ರಕರಣ: ಬಿಜೆಪಿ ಮುಖಂಡನ ವಿರುದ್ಧ FIR

Update: 2022-11-13 19:31 IST

ಕಲಬುರಗಿ:  ಶಾಸಕ ಪ್ರಿಯಾಂಕ್ ಖರ್ಗೆಗೆ ಜೀವ ಬೆದರಿಕೆ ಹಾಕಿದ ಆರೋಪದಲ್ಲಿ ಚಿತ್ತಾಪುರ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ವಿರುದ್ಧ ನಗರದ ಬ್ರಹ್ಮಪುರ ಠಾಣೆಯಲ್ಲಿ ಜೀವ ಬೆದರಿಕೆ ಪ್ರಕರಣ ದಾಖಲಾಗಿದೆ.

ಶಾಸಕ ಪ್ರಿಯಾಂಕ್ ಖರ್ಗೆ ಅವರನ್ನು ಶೂಟ್ ಮಾಡಲು ರೆಡಿ ಎಂಬ ಮಣಿಕಂಠ ರಾಠೋಡ್ ಹೇಳಿಕೆ ಖಂಡಿಸಿ, ಕಾಂಗ್ರೆಸ್ ಕಾರ್ಯಕರ್ತರು ಶನಿವಾರ ಎಸ್ಪಿ ಅವರಿಗೆ ದೂರು ನೀಡಿದ್ದರು.

ಜೀವ ಬೆದರಿಕೆ ಹಾಕಿದ ಮಣಿಕಂಠ ರಾಠೋಡ್ ಅವರ ವಿರುದ್ಧ ಐಪಿಸಿ ಸೆಕ್ಷನ್ 506 ಅಡಿ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.

ಇತ್ತೀಚೆಗೆ ನಗರದಲ್ಲಿ 'ಪ್ರಿಯಾಂಕ್ ಖರ್ಗೆ  ನಾಪತ್ತೆ' ಎಂಬ ಪೋಸ್ಟರ್ ಅಳವಡಿಸಿದ ಬಿಜೆಪಿ ಕಾರ್ಯಕರ್ತರ ನಡೆ ಖಂಡಿಸಿ, ' ನಾವು ಮತ್ತು ನಮ್ಮ ಕಾರ್ಯಕರ್ತರು ಮನಸ್ಸು ಮಾಡಿದರೆ ಬಿಜೆಪಿ ಲೀಡರ್‌ಗಳು ತಿರುಗಾಡಲು ಬಿಡುವುದಿಲ್ಲ. ಕಲಬುರಗಿ ಜಿಲ್ಲೆಯಲ್ಲಿ ಕಾಂಗ್ರೆಸ್​ ಪಕ್ಷದವರು ಸತ್ತೋಗಿಲ್ಲ'​ ಎಂಬ ಪ್ರಿಯಾಂಕ್‌ ಖರ್ಗೆ ಹೇಳಿಕೆಗೆ ಮಣಿಕಂಠ ರಾಠೋಡ್‌,  'ಪ್ರಿಯಾಂಕ್‌ ಖರ್ಗೆ ಅವರನ್ನು ಶೂಟ್‌ ಮಾಡಲು ನಾವು ಸಿದ್ಧರಿದ್ದೇವೆ' ಎಂದು ಹೇಳಿಕೆ ನೀಡಿದ್ದರು. 

Full View

Similar News