‘ತಳವಾರ’ ಸಮಾಜಕ್ಕೆ ST ಪ್ರಮಾಣ ಪತ್ರ ನೀಡಲು ಸೂಚನೆ: ಸಚಿವ ಕೋಟ ಶ್ರೀನಿವಾಸ ಪೂಜಾರಿ

Update: 2022-11-13 15:14 GMT

ಬೆಳಗಾವಿ, ನ. 13: ಪರಿಶಿಷ್ಟ ಪಂಗಡ(ಎಸ್‍ಟಿ)ದ ‘ತಳವಾರ, ಪರಿವಾರ’ ಸಮಾಜಗಳಿಗೆ ಕೇಂದ್ರ ಸರಕಾರದ ಸೂಚನೆ ಹಾಗೂ ರಾಜ್ಯ ಸರಕಾರದ ನಿರ್ದೇಶನದಂತೆ ಎಸ್‍ಟಿ ಪ್ರಮಾಣ ಪತ್ರವನ್ನು ನೀಡಲು ಆಯಾ ತಾಲೂಕುಗಳ ತಹಶಿಲ್ದಾರರಿಗೆ ಸೂಚಿಸಲಾಗಿದೆ ಎಂದು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ತಿಳಿಸಿದ್ದಾರೆ.

ರವಿವಾರ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ‘ತಳವಾರ’ ಸಮುದಾಯದ ಅಭಿನಂದನೆ ಸಮಾವೇಶದಲ್ಲಿ ಮಾತನಾಡಿದ ಅವರು, ಪರಿಶಿಷ್ಟ ಪಂಗಡದ ‘ತಳವಾರ’ ಸಮುದಾಯದ ಬಹುದಿನಗಳ ಬೇಡಿಕೆಯಾದ ಮೀಸಲಾತಿಯನ್ನು ಸರಕಾರ ಕಲ್ಪಿಸಿದೆ. ಅಲ್ಲದೆ, ಎಸ್‍ಟಿ ಮೀಸಲಾತಿ ಪ್ರಮಾಣವನ್ನು ಶೇ.3ರಿಂದ ಶೇ.7ಕ್ಕೆ ಹೆಚ್ಚಳ ಮಾಡಲಾಗಿದೆ ಎಂದು ತಿಳಿಸಿದರು.

‘ಲಿಂಗಾಯತ ಪಂಚಮಸಾಲಿ ಸೇರಿದಂತೆ ಹಲವು ಸಮುದಾಯಗಳು ಮೀಸಲಾತಿ ಬೇಡಿಕೆ ಇಟ್ಟಿದ್ದು, ಈ ಕುರಿತು ಸರಕಾರ ಸೂಕ್ತ ಸಂದರ್ಭದಲ್ಲಿ ತೀರ್ಮಾನ ಮಾಡಲಿದೆ ಎಂದು ಅವರು ಹೇಳಿದರು. ಸಚಿವ ಸಂಪುಟ ವಿಸ್ತರಣೆ ಮುಖ್ಯಮಂತ್ರಿ ಪರಮಾಧಿಕಾರ. ಅವರು ಸೂಕ್ತ ಸಂದರ್ಭದಲ್ಲಿ ಈ ಕುರಿತು ತೀರ್ಮಾನ ಮಾಡಲಿದ್ದಾರೆಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

Similar News