ಮಗುವಿನೊಂದಿಗೆ ತಾಯಿ ನಾಪತ್ತೆ
Update: 2022-11-13 21:29 IST
ಉಡುಪಿ: ತನ್ನ ಒಂದು ವರ್ಷದ ಹೆಣ್ಣು ಮಗುವಿನೊಂದಿಗೆ ಮನೆಯಿಂದ ಹೋದ ಮಹಿಳೆಯೊಬ್ಬರು ಈವರೆಗೆ ವಾಪಾಸು ಬಾರದೆ ನಾಪತ್ತೆಯಾಗಿರುವ ಘಟನೆ ಪಡುತೋನ್ಸ್ ಗ್ರಾಮ ಹೊಡೆಯಲ್ಲಿ ನಡೆದಿದೆ.
ನಾಪತ್ತೆಯಾದವರನ್ನು ಹೂಡೆಯ ನಿವಾಸಿ ಉಸ್ತಾದ್ ಝುಬೈರ್ ಎಂಬವರ ಪತ್ನಿ ಅನ್ಸಿಯಾ (32) ಹಾಗೂ ಅವರ ಒಂದು ವರ್ಷದ ಹೆಣ್ಣು ಮಗು ಅಜೀನ್ ಎಂದು ಗುರುತಿಸಲಾಗಿದೆ. ಅನ್ಸಿಯಾ ತನ್ನ ಮಗುವಿನೊಂದಿಗೆ ನ.7ರಂದು ತಾನು ಕೆಲಸ ಮಾಡುತ್ತಿದ್ದ ಹೈರಿಚ್ ಆಫೀಸ್‌ಗೆ ಹೋಗುವುದಾಗಿ ಮನೆಯಿಂದ ಹೋಗಿದ್ದರು. ಆದರೆ ಸಂಜೆ 5 ಗಂಟೆಯಾದರೂ ಮನೆಗೆ ವಾಪಾಸ್ಸು ಬಾರದೆ ನಾಪತ್ತೆಯಾಗಿದ್ದರು. ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಾಪತ್ತೆಯಾದ ತಾಯಿ ಮತ್ತು ಮಗವಿನ ಬಗ್ಗೆ ಮಾಹಿತಿ ಸಿಕ್ಕಿದರೆ ದೂರವಾಣಿ ಸಂಖ್ಯೆ 0820-2537999 ಅಥವಾ ಮೊಬೈಲ್ ಸಂಖ್ಯೆ 94808 05447 ಅನ್ನು ಸಂಪರ್ಕಿಸುವಂತೆ ವಿನಂತಿಸಲಾಗಿದೆ.