×
Ad

ಮಂಡ್ಯ: ರಸ್ತೆ ಗುಂಡಿ ತಪ್ಪಿಸಲು ಹೋಗಿ ನಿವೃತ್ತ ಯೋಧ ಮೃತ್ಯು

Update: 2022-11-13 23:39 IST

ಮಂಡ್ಯ, ನ.13: ಕಾರೆಮನೆ ಗೇಟ್ ಬಳಿ ರಸ್ತೆ ಗುಂಡಿ ತಪ್ಪಿಸಲು ಹೋಗಿ ಕೆಳಗೆ ಬಿದ್ದ ನಿವೃತ್ತ ಯೋಧರೊಬ್ಬರ ಮೇಲೆ ಲಾರಿ ಹರಿದ ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟಿದ್ದು, ಮೃತರ ತಂದೆ ಗಾಯಗೊಂಡಿರುವ ಘಟನೆ ರವಿವಾರ ನಡೆದಿರುವುದಾಗಿ ವರದಿಯಾಗಿದೆ.

ಭಾರತೀಯ ಸೇನೆಯಲ್ಲಿ ಕರ್ತವ್ಯ ನಿರ್ವಹಿಸಿ ನಿವೃತ್ತರಾಗಿರುವ ಸಾತನೂರು ನಿವಾಸಿ ಎಸ್.ಎನ್.ಕುಮಾರ್ (39) ಮೃತಪಟ್ಟವರು ಎಂದು ತಿಳಿದುಬಂದಿದೆ.

ನಿವೃತ್ತಿಯ ನಂತರ ಅವರು ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆಗೆ ಆಯ್ಕೆಯಾಗಿದ್ದು, ಬೆಂಗಳೂರಿನಲ್ಲಿ 6 ತಿಂಗಳಿಂದ ತರಬೇತಿ ಪಡೆಯುತ್ತಿದ್ದರು. ಗ್ರಾಮಕ್ಕೆ ಬಂದಿದ್ದ ಅವರು ತಂದೆಯೊಂದಿಗೆ ಬೈಕ್‌ನಲ್ಲಿ ಮಂಡ್ಯದಿಂದ ಗ್ರಾಮಕ್ಕೆ ತೆರಳುತ್ತಿದ್ದರು ಎನ್ನಲಾಗಿದೆ.

ರಸ್ತೆಯಲ್ಲಿದ್ದ ಗುಂಡಿಗಳನ್ನು ತಪ್ಪಿಸಲು ಹೋದ ಕುಮಾರ್ ಎಡಕ್ಕೆ ಬೈಕ್ ತಿರುಗಿಸಿದ್ದಾರೆ. ಎದುರಿನಿಂದ ಬರುತ್ತಿದ್ದ ಬೈಕ್‌ಗೆ ಢಿಕ್ಕಿಯಾಗಿ ಅವರು ಕೆಳಕ್ಕೆ ಬಿದ್ದಿದ್ದಾರೆ. ಹಿಂದಿನಿಂದ ಕಾಯಿಮೊಟ್ಟೆ ತುಂಬಿಕೊಂಡು ಬರುತ್ತಿದ್ದ ಲಾರಿ ಅವರ ತಲೆಯ ಮೇಲೆ ಹರಿದಿದ್ದು, ತೀವ್ರ ಅಸ್ವಸ್ಥಗೊಂಡ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

Similar News