ವಿಶ್ವವಿದ್ಯಾಲಯದ ಉಪಕುಲಪತಿ ನೇಮಕ ರದ್ದುಪಡಿಸಿದ ಕೇರಳ ಹೈಕೋರ್ಟ್‌

Update: 2022-11-14 07:39 GMT

ಹೊಸದಿಲ್ಲಿ: ರಾಜ್ಯ ವಿಶ್ವವಿದ್ಯಾಲಯದ ಉಪಕುಲಪತಿ ನೇಮಕವನ್ನು ಕೇರಳ ಹೈಕೋರ್ಟ್ Kerala High Court ಇಂದು ರದ್ದುಪಡಿಸಿದೆ. ವಿಶ್ವವಿದ್ಯಾನಿಲಯಗಳ ಕಾರ್ಯನಿರ್ವಹಣೆಗೆ ಸಂಬಂಧಿಸಿದಂತೆ ರಾಜ್ಯ ಸರಕಾರ ಹಾಗೂ ರಾಜ್ಯಪಾಲ ಆರಿಫ್ ಮುಹಮ್ಮದ್ ಖಾನ್ ನಡುವಿನ ಜಟಾಪಟಿಯ ನಡುವೆ ಹೈಕೋರ್ಟ್ ಈ ಆದೇಶ ನೀಡಿದೆ. ಈ ಆದೇಶವು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಗೆ ತೀವ್ರ ಹಿನ್ನಡೆಯಾಗಿದೆ ಎಂದು NDTV ವರದಿ ಮಾಡಿದೆ.

ಕೇರಳದ ಮೀನುಗಾರಿಕೆ ಹಾಗೂ  ಸಾಗರ ಅಧ್ಯಯನ ವಿಶ್ವವಿದ್ಯಾಲಯದ ಉಪಕುಲಪತಿಯಾಗಿ ಡಾ.ರಿಜಿ ಜಾನ್ ನೇಮಕವನ್ನು ಹೈಕೋರ್ಟ್ ರದ್ದುಗೊಳಿಸಿದೆ. ನೇಮಕಾತಿಯನ್ನು ಕಾನೂನುಬಾಹಿರ ಎಂದು ಹೇಳಿದ ನ್ಯಾಯಾಲಯವು ಈ ಪ್ರಕ್ರಿಯೆಯಲ್ಲಿ ವಿಶ್ವವಿದ್ಯಾಲಯ ಧನಸಹಾಯ ಆಯೋಗ (UGC) ನಿಗದಿಪಡಿಸಿದ ಮಾರ್ಗಸೂಚಿಗಳನ್ನು ಉಲ್ಲಂಘಿಸಲಾಗಿದೆ ಎಂದು  ಹೇಳಿದೆ.

UGC ಶಿಕ್ಷಣ ಸಚಿವಾಲಯದ ಅಡಿಯಲ್ಲಿ ಒಂದು ಶಾಸನಬದ್ಧ ಸಂಸ್ಥೆಯಾಗಿದ್ದು ಅದು ದೇಶಾದ್ಯಂತ ಉನ್ನತ ಶಿಕ್ಷಣ ಸಂಸ್ಥೆಗಳ ಕಾರ್ಯನಿರ್ವಹಣೆಯನ್ನು ಮೇಲ್ವಿಚಾರಣೆ ಮಾಡುತ್ತದೆ.

ಯುಜಿಸಿ ಮಾರ್ಗಸೂಚಿಗಳಿಗೆ ಅನುಗುಣವಾಗಿ ಹೊಸ ಉಪಕುಲಪತಿಯನ್ನು ನೇಮಕ ಮಾಡುವಂತೆ ವಿಶ್ವವಿದ್ಯಾಲಯಗಳ ಕುಲಪತಿ ಹುದ್ದೆ ಹೊಂದಿರುವ ರಾಜ್ಯಪಾಲ ಆರಿಫ್ ಮುಹಮ್ಮದ್ ಖಾನ್ ಅವರಿಗೆ ನ್ಯಾಯಾಲಯ ಸೂಚಿಸಿದೆ.

 ಕಳೆದ ತಿಂಗಳು ರಾಜ್ಯಪಾಲರು ಡಾ. ಜಾನ್ ಸೇರಿದಂತೆ ಒಂಬತ್ತು ವಿಶ್ವವಿದ್ಯಾನಿಲಯಗಳ ಉಪಕುಲಪತಿಗಳನ್ನು ಹುದ್ದೆಯಿಂದ ಕೆಳಗಿಳಿಸುವಂತೆ ಸೂಚಿಸಿದ ನಂತರ, ಅವರ ನೇಮಕಾತಿಯಲ್ಲಿ

ಯುಜಿಸಿ ನಿಯಮಾವಳಿಗಳನ್ನು ಉಲ್ಲಂಘಿಸಲಾಗಿದೆ ಎಂದು ಆರೋಪಿಸಿದ್ದರು.

Similar News