ಮಂಗಳೂರು : ನ.19ರಂದು ನೇರ ಸಂದರ್ಶನ
Update: 2022-11-14 19:44 IST
ಮಂಗಳೂರು, ನ.14: ನಗರದ ಲಾಲ್‌ಬಾಗ್‌ನಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನ.19ರ ಬೆಳಗ್ಗೆ 10ರಿಂದ ಮಧ್ಯಾಹ್ನ 1:30ರವರೆಗೆ ಮುತ್ತೂಟ್ ಫೈನಾನ್ಸ್ ವತಿಯಿಂದ ನೇರ ಸಂದರ್ಶನ ಆಯೋಜಿಸಲಾಗಿದೆ.
ದ.ಕ. ಹಾಗೂ ಉಡುಪಿ ಜಿಲ್ಲೆಗಳಲ್ಲಿ 18,000 ರೂ. ವೇತನ ಮತ್ತು ಇತರೆ ಭತ್ತೆಗಳನ್ನು ಒಳಗೊಂಡ ಕಸ್ಟಮರ್ ರಿಲೇಶನ್ ಎಕ್ಸಿಕ್ಯೂಟಿವ್ ಮತ್ತು ಫೀಲ್ಡ್ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಪಿಯುಸಿ, ಐಟಿಐ, ಡಿಪ್ಲೊಮಾ ಹಾಗೂ ಯಾವುದೇ ಪದವಿ ತೇರ್ಗಡೆಯಾದ ಪುರುಷರು ಬಯೋಡೇಟಾದೊಂದಿಗೆ ನೇರ ಸಂದರ್ಶನದಲ್ಲಿ ಹಾಜರಾಗಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಅಧಿಕಾರಿಯ ಪ್ರಕಟನೆ ತಿಳಿಸಿದೆ.