ಬೆಂಗಳೂರು ನಗರದಲ್ಲಿ ಮುಂದುವರಿದ ಫ್ಲೆಕ್ಸ್, ಅನಧಿಕೃತ ಜಾಹೀರಾತು ಫಲಕ: ನ್ಯಾಯಾಂಗ ನಿಂದನೆ ಅರ್ಜಿ ದಾಖಲು

Update: 2022-11-14 16:58 GMT

ಬೆಂಗಳೂರು, ನ.14: ನಗರದಲ್ಲಿ ಅನಧಿಕೃತ ಜಾಹೀರಾತು ಫಲಕಗಳನ್ನು ಅಳವಡಿಕೆ ತಡೆಯುವಲ್ಲಿ ವಿಫಲವಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಮತ್ತು ಬಿಬಿಎಂಪಿ ವಿರುದ್ಧ ಹೈಕೋರ್ಟ್‍ಗೆ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆಯಾಗಿದೆ.

ಸಾಮಾಜಿಕ ಕಾರ್ಯಕರ್ತ ಸಾಯಿದತ್ತಾ ಎಂಬುವರು ಅರ್ಜಿ ಸಲ್ಲಿಸಿದ್ದು, ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ಬಿಬಿಎಂಪಿ ಆಡಳಿತಾಧಿಕಾರಿಯೂ ಆದ ನಗರಾಭಿವೃದ್ಧಿ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್ ಮತ್ತು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಅವರನ್ನು ಅರ್ಜಿಯಲ್ಲಿ ಪ್ರತಿವಾದಿಗಳನ್ನಾಗಿ ಮಾಡಲಾಗಿದೆ.

ಜಾಹೀರಾತು ಫಲಕ ಅಳವಡಿಸಬೇಕಾದರೆ ಸ್ಥಳೀಯ ಸಂಸ್ಥೆಯ ಸಕ್ಷಮ ಅಧಿಕಾರಿಯಿಂದ ಲಿಖಿತ ಅನುಮತಿ ಪಡೆಯಬೇಕು. ಆದರೆ, ಯಾವುದೇ ಅನುಮತಿಯನ್ನು ಪಡೆಯದೇ ವಿಧಾನಸೌಧ ಆವರಣ ಸೇರಿದಂತೆ ನಗರದ ವಿವಿಧ ಸ್ಥಳಗಳಲ್ಲಿ ಅನಧಿಕೃತವಾಗಿ ಫ್ಲೆಕ್ಸ್, ಬ್ಯಾನರ್, ಹೋಡಿರ್ಂಗ್, ಪೋಸ್ಟರ್ ಗಳನ್ನು ಅಳವಡಿಸಲಾಗುತ್ತಿದೆ. ಇದರಿಂದ ನಗರದ ಸಾರ್ವಜನಿಕರಿಗೆ ತೀವ್ರತರದ ತೊಂದರೆ ಉಂಟಾಗುತ್ತಿದೆ. ಜತೆಗೆ, ನಗರದ ಸೌಂದರ್ಯಕ್ಕೆ ಧಕ್ಕೆ ಉಂಟಾಗುತ್ತಿದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

  

Similar News