×
Ad

ಜಿ20 ಶೃಂಗಸಭೆಯ ನೇಪಥ್ಯದಲ್ಲಿ ಭೇಟಿಯಾದ ಬೈಡನ್-ಜಿಂಪಿಂಗ್

Update: 2022-11-14 23:18 IST

ಜಕಾರ್ತ, ನ.14: ಇಂಡೊನೇಶ್ಯಾದಲ್ಲಿ ನಡೆಯಲಿರುವ ಜಿ20 ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಆಗಮಿಸಿರುವ ಅಮೆರಿಕದ ಅಧ್ಯಕ್ಷ ಜೋ ಬೈಡನ್ (Joe Biden)ಹಾಗೂ ಚೀನಾದ ಅಧ್ಯಕ್ಷ ಕ್ಸಿ ಜಿಂಪಿಂಗ್ (President Xi Jinping)ಕಳೆದ 2 ವರ್ಷದಲ್ಲಿ ಇದೇ ಪ್ರಥಮ ಬಾರಿಗೆ ಮುಖತಃ ಭೇಟಿಯಾಗಿದ್ದಾರೆ ಎಂದು ವರದಿಯಾಗಿದೆ.

ಸುಮಾರು 2 ವರ್ಷದ ಹಿಂದೆ ಅಮೆರಿಕದ ಅಧ್ಯಕ್ಷರಾಗಿ ಬೈಡನ್ ಅಧಿಕಾರ ಸ್ವೀಕರಿಸಿದ ಬಳಿಕ ಉಭಯ ಮುಖಂಡರ ಮಧ್ಯೆ ಫೋನಿನ ಮೂಲಕ ಅಥವಾ ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಮಾತ್ರ ಮಾತುಕತೆ ನಡೆದಿತ್ತು. ಎರಡೂ ದೇಶಗಳು ತಮ್ಮ ನಡುವಿನ ಭಿನ್ನಾಭಿಪ್ರಾಯಗಳನ್ನು ಸೂಕ್ತವಾಗಿ ನಿರ್ವಹಿಸಬಹುದು ಎಂಬುದನ್ನು ತೋರಿಸಿಕೊಡುವ ಹಾಗೂ ಪರಸ್ಪರ ಸಹಕಾರದ ಕ್ಷೇತ್ರಗಳನ್ನು ಗುರುತಿಸುವ ಮಹತ್ತರ ಜವಾಬ್ದಾರಿ ತಮ್ಮಿಬ್ಬರ ಮೇಲಿದೆ ಎಂದು ಅಮೆರಿಕ ಅಧ್ಯಕ್ಷ ಬೈಡನ್ ಈ ಸಂದರ್ಭ ಹೇಳಿದ್ದಾರೆ.

 ಬೈಡನ್ ಅವರೊಂದಿಗೆ ನೇರ ಮತ್ತು ಆಳವಾದ ಅಭಿಪ್ರಾಯ ವಿನಿಮಯ ನಡೆಸಲು ತಾನು ಸಿದ್ಧನಾಗಿರುವುದಾಗಿ ಜಿಂಪಿಂಗ್ ಇದೇ ಸಂದರ್ಭ ಪ್ರತಿಕ್ರಿಯಿಸಿದ್ದಾರೆ. ತೈವಾನ್ ವಿಷಯಕ್ಕೆ ಸಂಬಂಧಿಸಿ ಚೀನಾ ಮತ್ತು ಅಮೆರಿಕದ ನಡುವಿನ ದ್ವಿಪಕ್ಷೀಯ ಬಾಂಧವ್ಯ ಇತ್ತೀಚೆಗೆ ಹಳಸಿದೆ.

Similar News