ವಿಧಾನಸಭೆ ಚುನಾವಣೆ | ಕಾಂಗ್ರೆಸ್ ಟಿಕೆಟ್ ಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

Update: 2022-11-15 15:01 GMT

ಬೆಂಗಳೂರು, ನ.15: ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಿಂದ ಅರ್ಜಿ ಸಲ್ಲಿಕೆಗೆ ನಿಗದಿ ಮಾಡಲಾಗಿದ್ದ ಗಡುವನ್ನು ನ.21ರವರೆಗೆ ವಿಸ್ತರಿಸಲಾಗಿದೆ.

ಈ ಮೊದಲು ಅರ್ಜಿ ಸಲ್ಲಿಕೆಗೆ ನ.15  ಕೊನೆ ದಿನವಾಗಿತ್ತು. ಆದರೆ ಈ ಅವಧಿ ವಿಸ್ತರಣೆ ಮಾಡುವಂತೆ ರಾಜ್ಯದ ಮೂಲೆ, ಮೂಲೆಗಳಿಂದ ಪಕ್ಷದವರು ಹಾಗೂ ಅನ್ಯ ಪಕ್ಷಗಳಿಂದ ಕಾಂಗ್ರೆಸ್‍ಗೆ ಬರಲು ಇಚ್ಚಿಸಿರುವ ಟಿಕೆಟ್ ಆಕಾಂಕ್ಷಿಗಳಿಂದ ಒತ್ತಡ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಈ ಬದಲಾವಣೆ ಮಾಡಲಾಗಿದೆ ಎಂದು ಕೆಪಿಸಿಸಿ (Karnataka Pradesh Congress Committee) ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ... ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲು ಕಾಂಗ್ರೆಸ್​​ ಟಿಕೆಟ್​ಗೆ ಅರ್ಜಿ ಸಲ್ಲಿಸಿದ ಸಿನೆಮಾ ನಿರ್ಮಾಪಕ ಉಮಾಪತಿ ಗೌಡ

Similar News