ಪಡುಬಿದ್ರಿಯ ಸಹಕಾರಿ ಸೊಸೈಟಿಯ ಕಾರ್ಯ ಶ್ಲಾಘನಾರ್ಹ: ಜಯಕರ ಶೆಟ್ಟಿ ಇಂದ್ರಾಳಿ

ಸಹಕಾರಿ ಸಪ್ತಾಹದಲ್ಲಿ ಒಂದು ದಿನದ ತರಬೇತಿ

Update: 2022-11-15 13:31 GMT

ಪಡುಬಿದ್ರಿ: ರೈತರ ಆರ್ಥಿಕ ಸಮಸ್ಯೆಗಳಿಗೆ ಪರಿಹಾರವನ್ನು ನೀಡುವ ಮಹತ್ಕಾರ್ಯವನ್ನು ಪಡುಬಿದ್ರಿಯ ಸಹಕಾರಿ ಸೊಸೈಟಿಯೂ ಮಾಡುತ್ತಿರುವುದಾಗಿ ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್‍ನ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ತಿಳಿಸಿದರು.

ಅವರು ಮಂಗಳವಾರ ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿಯ ಸಹಕಾರ ಸಂಗಮದ ವೈ. ಲಕ್ಷ್ಮಣ್ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್, ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ ಮತ್ತು ಉಡುಪಿ ಜಿಲ್ಲಾ ಸಹಕಾರಿ ಇಲಾಖೆಗಳ ಸಹಯೋಗದಲ್ಲಿ 69ನೇ ಸಹಕಾರ ಸಪ್ತಾಹದ ಕಾರ್ಯಕ್ರಮದಲ್ಲಿ ಒಂದು ದಿನದ ತರಬೇತಿ ಕಾರ್ಯಕ್ರಮದ ಉದ್ಘಾಟನೆ ಮಾಡಿ ಮಾತನಾಡಿದರು.

ದೇಶದ ಆರ್ಥಿಕತೆಯ ಅಭಿವೃದ್ಧಿಯಲ್ಲಿ ಸಹಕಾರಿಗಳ ಪಾತ್ರವು ಮಹತ್ತರವಾದುದು. ಹಾಗಾಗಿಯೇ ಶಾಸನ ಸಭೆಗಳಲ್ಲಿ ಸಹಕಾರಿಗಳಿಗೂ ಪ್ರಾತಿನಿಧ್ಯದ ಕುರಿತು ಒತ್ತಾಸೆಯೂ ಇದೆ. ರಾಜ್ಯ ಸಹಕಾರಿ ಮಹಾ ಮಂಡಲವು ಸಹಕಾರಿಗಳಿಗೆ ಉತ್ತಮ ತರಬೇತಿಯನ್ನೂ ನೀಡುತ್ತಿದೆ ಎಂದು ಹೇಳಿದರು.

ಮುಖ್ಯ ಅತಿಥಿಗಳಾಗಿದ್ದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಮೀನು ಮಾರಾಟ ಯೂನಿಯನ್ ಹಾಗೂ ಶ್ರೀ ಮಹಾಲಕ್ಷ್ಮೀ ಕೊ - ಆಪರೇಟಿವ್ ಬ್ಯಾಂಕಿನ ಅಧ್ಯಕ್ಷ ಯಶ್‍ಪಾಲ್ ಸುವರ್ಣ ಮಾತನಾಡಿ, ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರಕಾರವು ಇದೀಗ ಸಹಕಾರಿ ಸಚಿವಾಲಯವನ್ನು ಆರಂಭಿಸಿದ್ದು ಸಹಕಾರಿ ರಂಗವು ಇನ್ನಷ್ಟು ಬೆಳೆಯಬೇಕಿದೆ. ನಮ್ಮ ಜಿಲ್ಲೆಯಲ್ಲಿ ಸಹಕಾರಿ ರಂಗದ ಬೆಳವಣಿಗೆಯಲ್ಲಿ ಜಯಕರ ಶೆಟ್ಟಿ ಇಂದ್ರಾಳಿ ಅವರ ಪಾತ್ರವು ಹಿರಿದಾಗಿದೆ ಎಂದರು.

ನಿವೃತ್ತ ಪ್ರೊಪೆಷರ್  ಡಾ. ಗಣನಾಥ ಎಕ್ಕಾರು ಸಹಕಾರಿಗಳಿಗೆ ತರಬೇತಿ ಕಾರ್ಯಕ್ರಮದಲ್ಲಿ ಸಹಕಾರ ಮಾರುಕಟ್ಟೆ, ಗ್ರಾಹಕ, ರೂಪಾಂತರ ಮತ್ತು ಮೌಲ್ಯವರ್ಧನೆ ಬಗ್ಗೆ ದಿಕ್ಸೂಚಿ ಭಾಷಣಗೈದರು. 

ವೇದಿಕೆಯಲ್ಲಿ ಉಡುಪಿ ಜಿಲ್ಲಾ ಸಹಕಾರಿ ಇಲಾಖೆಯ ಸಹಾಯಕ ನಿಬಂಧಕ ಲಕ್ಷ್ಮೀನಾರಾಯಣ್ ಜಿ. ಎನ್., ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿಯ ಉಪಾಧ್ಯಕ್ಷ ಗುರುರಾಜ ಪೂಜಾರಿ, ತೆಂಕ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕಸ್ತೂರಿ ಪ್ರವೀಣ್ ಉಪಸ್ಥಿತರಿದ್ದರು. 

ಪ್ರತಿಭಾವಂತ ವಿದ್ಯಾರ್ಥಿಗಳಿಬ್ಬರಿಗೆ ಪಡುಬಿದ್ರಿ ಸಿಎ ಸೊಸೈಟಿಯ ಮೂಲಕ ಸಹಾಯಧನವನ್ನು ವಿತರಿಸಲಾಯಿತು. ಪಡುಬಿದ್ರಿ ಸೊಸೈಟಿಯ ಅಧ್ಯಕ್ಷ ವೈ. ಸುಧೀರ್ ಕುಮಾರ್ ಸ್ವಾಗತಿಸಿದರು. ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿಯ ಮುಖ್ಯ ಕಾರ್ಯನಿರ್ವಹಣಾ„ಕಾರಿ ನಿಶ್ಮಿತಾ ಪಿ. ಎಚ್. ಕಾರ್ಯಕ್ರಮ ನಿರ್ವಹಿಸಿದರು. ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್‍ನ ಮುಖ್ಯ ಕಾರ್ಯನಿರ್ವಹಣಾ„ಕಾರಿ ಪ್ರಾಸ್ತಾವಿಸಿ ವಂದಿಸಿದರು. 

Similar News