×
Ad

ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ: BBMP ಅಧಿಕಾರಿಗೆ 4 ವರ್ಷ ಜೈಲು ಶಿಕ್ಷೆ ವಿಧಿಸಿದ ಕೋರ್ಟ್

Update: 2022-11-15 20:04 IST

ಬೆಂಗಳೂರು, ನ.15: ನಿಗದಿತ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ಬಿಬಿಎಂಪಿ ಎಆರ್ ಒ ಪ್ರಸನ್ನ ಕುಮಾರ್ ಗೆ ನಾಲ್ಕು ವರ್ಷ ಜೈಲು ಶಿಕ್ಷೆ ಹಾಗೂ 40 ಲಕ್ಷ ರೂ.ದಂಡ ವಿಧಿಸಿ ಬೆಂಗಳೂರಿನ ಲೋಕಾಯುಕ್ತ ವಿಶೇಷ ಕೋರ್ಟ್ ಆದೇಶ ಹೊರಡಿಸಿದೆ. 

ಲೋಕಾಯುಕ್ತ ಪೊಲೀಸರು 2013ರಲ್ಲಿ ಶೋಧ ನಡೆಸಿದ್ದರು. ಪ್ರಸನ್ನಕುಮಾರ್ ಶೇ.61.69 ರಷ್ಟು ಆದಾಯ ಮೀರಿ ಆಸ್ತಿ ಗಳಿಕೆ ಮಾಡಿದ್ದ ಆರೋಪ ಕೇಳಿ ಬಂದಿತ್ತು. 

38,96,310 ರೂ.ಆದಾಯ ಮೀರಿ ಆಸ್ತಿ ಗಳಿಕೆ ಸಾಬೀತಾಗಿತ್ತು. ಈ ಹಿನ್ನೆಲೆಯಲ್ಲಿ ನಾಲ್ಕು ವರ್ಷ ಕಾರಾಗೃಹ ಶಿಕ್ಷೆ, 40 ಲಕ್ಷ ರೂ.ದಂಡ ವಿಧಿಸಲಾಗಿದೆ.  

Similar News