ಸರಕಾರಿ ಕಚೇರಿಗಳಿಂದ ಪ್ರಧಾನಿ ಭಾವಚಿತ್ರ ತೆರವುಗೊಳಿಸಿ: ಚುನಾವಣಾ ಆಯೋಗಕ್ಕೆ ಆಪ್ ಆಗ್ರಹ

Update: 2022-11-15 16:13 GMT

 ಹೊಸದಿಲ್ಲಿ, ನ. 15: ವಿಧಾನ ಸಭೆ ಚುನಾವಣೆ ಮುಗಿಯುವ ವರೆಗೆ ಗುಜರಾತ್ನ ಸರಕಾರಿ ಕಚೇರಿಗಳಲ್ಲಿರುವ ಪ್ರಧಾನಿ ನರೇಂದ್ರ ಮೋದಿ (Narendra Modi)ಅವರ ಭಾವಚಿತ್ರವನ್ನು ತೆಗೆಯಲು ಅಥವಾ ಅವುಗಳನ್ನು ಮುಚ್ಚಲು ನಿರ್ದೇಶನ ನೀಡುವಂತೆ ಆಮ್ ಆದ್ಮಿ ಪಕ್ಷ (Aam Aadmi Party)ಸೋಮವಾರ ಚುನಾವಣಾ ಆಯೋಗವನ್ನು ಆಗ್ರಹಿಸಿದೆ.

ಆಮ್ ಆದ್ಮಿ ಪಕ್ಷದ ಕಾನೂನು ಘಟಕದ ಪ್ರಧಾನ ಕಾರ್ಯದರ್ಶಿ ಪುನೀತ್ ಜುನೇಜಾ(Puneet Juneja)ಅವರು ಚುನಾವಣಾ ಆಯೋಗಕ್ಕೆ ಈ ಬಗ್ಗೆ ಮನವಿ ಸಲ್ಲಿಸಿದ್ದಾರೆ. ನರೇಂದ್ರ ಮೋದಿ ಅವರು ಬಿಜೆಪಿಯ ಸ್ಟಾರ್ ಪ್ರಚಾರಕರು. ಗುಜರಾತ್ನಲ್ಲಿರುವ ಕೇಂದ್ರ ಹಾಗೂ ರಾಜ್ಯ ಸರಕಾರದ ಕಚೇರಿಗಳಲ್ಲಿರುವ ಅವರ ಭಾವಚಿತ್ರಗಳು ಮಾದರಿ ನೀತಿ ಸಂಹಿತೆಯ ಉಲ್ಲಂಘನೆಯಾಗಿದೆ ಎಂದು ಆಮ್ ಆದ್ಮಿ ಪಕ್ಷ ಹೇಳಿದೆ. 

ಬಿಜೆಪಿಯ ಸ್ಟಾರ್ ಪ್ರಚಾರಕರ ಭಾವಚಿತ್ರ ಚುನಾವಣೆ ಮೇಲೆ ಪ್ರಭಾವ ಬೀರಬಹುದು. ಆದುದರಿಂದ ರಾಜ್ಯದಲ್ಲಿ ಮುಕ್ತ ಹಾಗೂ ಪಾರದರ್ಶಕ ಚುನಾವಣೆ ನಡೆಯಲು ಈ ಬಗ್ಗೆ ಕೂಡಲೇ ನಿರ್ದೇಶನಗಳನ್ನು ನೀಡಬಹುದು ಎಂದು ಆಪ್ ಹೇಳಿದೆ. ಗುಜರಾತ್ನಲ್ಲಿ ವಿಧಾನ ಸಭೆ ಚುನಾವಣೆ ಡಿಸೆಂಬರ್ 1 ಹಾಗೂ ಡಿಸೆಂಬರ್ 5ರಂದು ಎರಡು ಹಂತಗಳಲ್ಲಿ ನಡೆಯಲಿದೆ. ಮತ ಎಣಿಕೆ ಡಿಸೆಂಬರ್ 8ರಂದು ನಡೆಯಲಿದೆ. 

Similar News