ಭಿಕ್ಷಾಟನೆ ಕಾರ್ಯಾಚರಣೆ: ಮಕ್ಕಳು ಸಹಿತ ಮಹಿಳೆಯರ ರಕ್ಷಣೆ
Update: 2022-11-15 21:44 IST
ಉಡುಪಿ, ನ.15: ವಿವಿಧ ಇಲಾಖೆಗಳ ನೇತೃತ್ವದಲ್ಲಿ ಭಿಕ್ಷಾಟನೆ ನಿರತ ಮಕ್ಕಳ ರಕ್ಷಣೆ ಮತ್ತು ಪುನರ್ ವಸತಿ ಕಾರ್ಯಾಚರಣೆಯನ್ನು ಇಂದು ಉಡುಪಿ ಜಿಲ್ಲೆಯಾದ್ಯಂತ ನಡೆಸಲಾಯಿತು.
ಉಡುಪಿ, ಕುಂದಾಪುರ, ಬ್ರಹ್ಮಾವರ ಹಾಗೂ ಕಾಪು ತಾಲೂಕಿನಲ್ಲಿ ಭೀಕ್ಷಾಟನೆಯಲ್ಲಿ ತೊಡಗಿದ್ದ ಇಬ್ಬರು ಮಹಿಳೆಯರು ಹಾಗೂ ಇಬ್ಬರು ಮಕ್ಕಳನ್ನು ಸಖಿ ಒನ್ ಸ್ಟಾಪ್‌ನಲ್ಲಿ ಪುನರ್ವಸತಿ ಕಲ್ಪಿಸಲಾಗಿದೆ.
ಈ ಕಾರ್ಯಾಚರಣೆಯನ್ನು ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಕಾರ್ಮಿಕ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಪೊಲೀಸ್ ಇಲಾಖೆ, ಪುರಸಭೆ, ನಗರಸಭೆ, ಪಟ್ಟಣ ಪಂಚಾಯತ್, ನಾಗರೀಕ ಸಮಿತಿ ನಡೆಸಿದೆ.