ಬಿಜೆಪಿ ಗೆದ್ದರೆ ಮುಖ್ಯಮಂತ್ರಿಯಾಗಿ ಭೂಪೇಂದ್ರ ಪಟೇಲ್ ಮುಂದುವರಿಕೆ: ಅಮಿತ್ ಶಾ

Update: 2022-11-15 16:17 GMT

ಅಹ್ಮದಾಬಾದ್, ನ. 15: ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ ಭೂಪೇಂದ್ರ ಪಟೇಲ್ ಗುಜರಾತ್ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಸೋಮವಾರ ನ್ಯೂಸ್ 18 ಸುದ್ದಿ ಚಾನೆಲ್‌ನಲ್ಲಿ ಹೇಳಿದ್ದಾರೆ.

“ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ ಭೂಪೇಂದ್ರ ಪಟೇಲ್ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ. ಅದರಲ್ಲಿ ಯವುದೇ ಸಂಶಯವಿಲ್ಲ’’ ಎಂದು ಟಿವಿ ಚಾನೆಲ್‌ಗೆ ನೀಡಿದ ಸಂದರ್ಶನದಲ್ಲಿ ಅವರು ಹೇಳಿದರು.

ಪಟೇಲ್ ಗುಜರಾತ್‌ನ 17ನೇ ಮುಖ್ಯಮಂತ್ರಿಯಾಗಿ 2021 ಸೆಪ್ಟಂಬರ್ 13ರಂದು ಪ್ರಮಾಣವಚನ ಸ್ವೀಕರಿಸಿದ್ದರು. ಹಿಂದಿನ ಮುಖ್ಯಮಂತ್ರಿ ವಿಜಯ ರೂಪಾನಿ ತನ್ನ ಇಡೀ ಸಚಿವ ಸಂಪುಟದೊAದಿಗೆ ರಾಜೀನಾಮೆ ನೀಡಿದ ಬಳಿಕ ಪಟೇಲ್ ಅಧಿಕಾರ ವಹಿಸಿಕೊಂಡಿದ್ದರು.

ಗುಜರಾತ್‌ನಲ್ಲಿ ಡಿಸೆಂಬರ್ 1 ಮತ್ತು 5ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. ಫಲಿತಾಂಶವು ಡಿಸೆಂಬರ್ 8ರಂದು ಹೊರಬೀಳಲಿದೆ.

ಈ ಬಾರಿ ಗುಜರಾತ್‌ನಲ್ಲಿ ಬಿಜೆಪಿ, ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷವನ್ನೊಳಗೊಂಡ ತ್ರಿಕೋನ ಸ್ಪರ್ಧೆಯಿದೆ.

Similar News