ಬಾಲಕಿಯ ಅತ್ಯಾಚಾರ: ಆರೋಪ
Update: 2022-11-15 22:34 IST
ಬೆಂಗಳೂರು, ನ.15: ಹದಿನೈದು ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿರುವ ಘಟನೆ ನಗರದ ತಲಘಟ್ಟಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ತಲಘಟ್ಟಪುರ ವ್ಯಾಪ್ತಿಯ ನಿರ್ಜನ ಪ್ರದೇಶದಲ್ಲಿ ಪರಿಚಯಸ್ಥ 15 ವರ್ಷದ ಬಾಲಕಿಯನ್ನು ವೇಣುಗೋಪಾಲ್ ಎಂಬಾತ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ ಎಂದು ಹೇಳಲಾಗುತ್ತಿದೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ದಕ್ಷಿಣ ವಿಭಾಗ ಡಿಸಿಪಿ ಕೃಷ್ಣಕಾಂತ್, ತಲಘಟ್ಟಪುರದಲ್ಲಿ ನಿನ್ನೆ ರಾತ್ರಿ ಹೊಯ್ಸಳ ಪೊಲೀಸರು ಬೀಟ್‍ನಲ್ಲಿದ್ದರು. ಈ ವೇಳೆ ಅನುಮಾನಾಸ್ಪದವಾಗಿ ಇಬ್ಬರು ಓಡಾಡುತ್ತಿರುವುದನ್ನು ಗಮನಿಸಿದ್ದಾರೆ. ಅವರನ್ನು ವಿಚಾರಿಸಿದ ಪೊಲೀಸರಿಗೆ ಸಾಕಷ್ಟು ಅನುಮಾನ ಬಂದಿತ್ತು. ಹೀಗಾಗಿ ಅವರನ್ನು ಪೊಲೀಸ್ ಠಾಣೆಗೆ ಕರೆತಂದು ವಿಚಾರಣೆ ನಡೆಸಿದ್ದು, ಬಾಲಕಿ ಆರೋಪಿಯ ಸಂಬಂಧಿ ಎಂದು ಹೇಳಲಾಗುತ್ತಿದೆ. ಅದರ ಬಗ್ಗೆ ಪರಿಶೀಲನೆ ನಡೆಸಲಾಗ್ತಿದೆ. ಈ ಬಗ್ಗೆ ತಲಘಟ್ಟಪುರ ಪೊಲೀಸ್ ಠಾಣೆ ದೂರು ಕೂಡ ದಾಖಲಾಗಿದೆ ಎಂದು ತಿಳಿಸಿದರು.