ವಿಧಾನಸಭೆ ಚುನಾವಣೆ 2023 | ಕಾಂಗ್ರೆಸ್ ಟಿಕೆಟ್ ಗೆ ಅರ್ಜಿ ಸಲ್ಲಿಸಿದ ನಟಿ

ಹಲವು ಕ್ಷೇತ್ರಗಳಲ್ಲಿ ಒಂದೇ ಕುಟುಂಬದ ಸದಸ್ಯರಿಂದ ಅರ್ಜಿ ಸಲ್ಲಿಕೆ

Update: 2022-11-16 09:44 GMT

ಬೆಂಗಳೂರು:  ಮುಂದಿನ ವಿಧಾನಸಭೆ ಚುನಾವಣೆಗೆ ರಾಜಕೀಯ ಪಕ್ಷದ ನಾಯಕರು ಸಜ್ಜಾಗುತ್ತಿದ್ದು, ಕಾಂಗ್ರೆಸ್ ನಿಂದ ಟಿಕೆಟ್ ಬಯಸಿರುವವರು ಅರ್ಜಿ ಸಲ್ಲಿಕೆಗೆ ನಿಗದಿ ಮಾಡಲಾಗಿದ್ದ ಗಡುವನ್ನು ನ.21ರವರೆಗೆ ವಿಸ್ತರಿಸಲಾಗಿದೆ.

ಯಶವಂತಪುರ ಕ್ಷೇತ್ರದಿಂದ ಸ್ಪರ್ಧಿಸಲು ಕಾಂಗ್ರೆಸ್ ನ ಟಿಕೆಟ್​ ಆಕಾಂಕ್ಷಿಯಾಗಿರುವ ಕನ್ನಡದ ನಟಿ ಭಾವನಾ ಮಂಗಳವಾರ ಅರ್ಜಿ ಸಲ್ಲಿಸಿದ್ದಾರೆ. 'ಕಾಂಗ್ರೆಸ್ ವರಿಷ್ಠರು ನನಗೆ ಟಿಕೆಟ್ ಕೊಡಬಹುದೆಂಬ ವಿಶ್ವಾಸವಿದೆ' ಎಂದು ನಟಿ ಭಾವನಾ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ.

► ಕನಕಪುರ ಕ್ಷೇತ್ರದ  ಕಾಂಗ್ರೆಸ್ ಟಿಕೆಟ್​ಗೆ ಅರ್ಜಿ ಸಲ್ಲಿಸಿದ ಡಿಕೆಶಿ: ಮಂಗಳವಾರ ದಹಲಿಯಲ್ಲಿದ್ದ ಕಾರಣ ವಿಧಾನಸಭಾ ಚುನಾವಣೆಗೆ ಟಿಕೆಟ್‌ಗಾಗಿ ಅರ್ಜಿ ಸಲ್ಲಿಸಲು ನಿನ್ನೆ ಕೊನೆಯ ದಿನವಾಗಿತ್ತು. ಆದ್ದರಿಂದ ಕನಕಪುರ ವಿಧಾನಸಭಾ ಕ್ಷೇತ್ರದ ಟಿಕೆಟ್‌ಗಾಗಿ ಡಿಕೆಶಿ ಪರವಾಗಿ ಪರಿಷತ್ ಸದಸ್ಯ ರವಿ ಅವರು ಕೆ.ಪಿ.ಸಿ.ಸಿ ಕಚೇರಿ ಕಾರ್ಯದರ್ಶಿ ನಾರಾಯಣ್ ಅವರಿಗೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ. 

► ಹಲವು ಕ್ಷೇತ್ರಗಳಲ್ಲಿ ಒಂದೇ ಕುಟುಂಬದ ಸದಸ್ಯರು:  ಮಾಜಿ ಸಚಿವ ಎಚ್. ಸಿ ಮಹಾದೇವಪ್ಪ ಹಾಗೂ ಅವರ ಪುತ್ರ ಸುನೀಲ್ ಬೋಸ್ ಟಿಕೆಟ್ ಗಾಗಿ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ನಂಜನಗೂಡಿಗೆ ಎಚ್ ಸಿ ಮಹಾದೇವಪ್ಪ ಅರ್ಜಿ‌ ಹಾಕಿದರೆ, ಟಿ. ನರಸೀಪುರ ಕ್ಷೇತ್ರಕ್ಕೆ ಸುನೀಲ್ ಬೋಸ್ ಅರ್ಜಿ ಸಲ್ಲಿಸಿದ್ದಾರೆ. ಇನ್ನು ಸಾಗರ ಕ್ಷೇತ್ರಕ್ಕೆ ಕಾಗೋಡು ತಿಮ್ಮಪ್ಪ, ಕಾಗೋಡು ಅವರ ಪುತ್ರಿ ಡಾ.ರಾಜನಂದಿನಿ, ಅಳಿಯ ಬೇಳೂರು ಗೋಪಾಲಕೃಷ್ಣ  ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಆದರೆ, 'ನಮ್ಮ ಮನೆಯಿಂದ ಒಬ್ಬರೇ ಚುನಾವಣೆಗೆ ಸ್ಪರ್ಧಿಸಲಿದ್ದು,  ಹೈಕಮಾಂಡ್ ಹೇಳಿದ ಹಾಗೆ ಕೆಲಸ ಮಾಡುತ್ತೇವೆ' ಎಂದು ಕಾಗೋಡು ತಿಮ್ಮಪ್ಪ ತಿಳಿಸಿದ್ದಾರೆ.

ಇದನ್ನೂ ಓದಿವಿಧಾನಸಭೆ ಚುನಾವಣೆ | ಕಾಂಗ್ರೆಸ್ ಟಿಕೆಟ್ ಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

Similar News